ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಅಸ್ತು

ಉಡುಪಿ: ಜಿಲ್ಲೆಯ ಬ್ರಹ್ಮಾವರ ಸಕ್ಕರೆ ಕಾರ್ಖಾನೆಗಳ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಒಟ್ಟು 27 ಕೋಟಿ ಬಿಡುಗಡೆ ಮಾಡಲು ಮುಂದಾಗಿದೆ.
   ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ 12 ಕೋಟಿ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ ಎಂದು ಸಕ್ಕರೆ ಮತ್ತು ಮುಜರಾಯಿ ಸಚಿವ ಪ್ರಕಾಶ್ ಹುಕ್ಕೇರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆಗಳ ಪುನಶ್ಚೇತನಕ್ಕೆ ಹಣ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಈಗಾಗಲೇ ಸೂಚಿಸಿದ್ದು, ಆರ್ಥಿಕ ಇಲಾಖೆ ಈ ಕುರಿತು ಆದೇಶ ಹೊರಡಿಸಬೇಕಿದೆ ಎಂದರು.
   ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಿಂದ ರೈತರು ಮತ್ತು ಕಾರ್ಮಿಕರಿಗೆ ಸಾಕಷ್ಟು ಬಾಕಿ ಪಾವತಿಸಬೇಕಿದೆ. ಜತೆಗೆ ಬ್ಯಾಂಕ್ ಸಾಲವನ್ನೂ ಮರುಪಾವತಿ ಮಾಡಬೇಕಿದೆ. ಇದಕ್ಕೆ ಸುಮಾರು 12 ಕೋಟಿ ಬೇಕು ಎಂದು ಸರ್ಕಾರಕ್ಕೆ ಈಗಾಗಲೇ ವರದಿ ಸಲ್ಲಿಸಿದ್ದು, ಅದರಂತೆ ಹಣ ಬಿಡುಗಡೆಗೆ ತೀರ್ಮಾನಿಸಲಾಗಿದೆ. ಅದೇ ರೀತಿ ಮೈಶುಗರ್ಸ್ ಪುನಶ್ಚೇತನಕ್ಕೂ ಅಗತ್ಯ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಪಾಂಡವಪುರ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ 30 ಕೋಟಿ ಬಿಡುಗಡೆ ಮಾಡಬೇಕು ಎಂದು ಕಾರ್ಖಾನೆ ಆಡಳಿತ ಮಂಡಳಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದೆ. ಈ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಪುನಶ್ಚೇತನಕ್ಕೆ ಬೇಕಾದ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸಚಿವರು ಹೇಳಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com