ಮದ್ಯವರ್ಜನ ಶಿಬಿರ ಸಮಾರೋಪ

ತ್ರಾಸಿ: ಮದ್ಯಪಾನ ತ್ಯಜಿಸಿ ನವಜೀವನಕ್ಕೆ ಕಾಲಿಡುತ್ತಿರುವವರು ಸಮಾಜದಲ್ಲಿ ಎಲ್ಲ ಗೌರವಗಳನ್ನು ಪಡೆದುಕೊಳ್ಳುತ್ತಾರೆ. ಮದ್ಯಪಾನ ಶಿಬಿರ ಮುಗಿಸಿ ಹೋದ ಶಿಬಿರಾರ್ಥಿಗಳು ಪುನಃ ಮದ್ಯಪಾನಕ್ಕೆ ಬಲಿಯಾಗದೆ, ಸಮಾಜದ ಸತ್ಪ್ರಜೆಗಳಾಗಿ ಕುಟುಂಬದ ಆಧಾರ ಸ್ತಂಬಗಳಾ ಗಬೇಕು. ತಮ್ಮಲ್ಲಿನ ದುರ್ನಡತೆ ತಿದ್ದಿಕೊಂಡು ಉತ್ತಮ ಜೀವನ ನಡೆಸುವಂತಾಗಬೇಕು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ದೇವದಾಸ ಹೆಬ್ಬಾರ್ ಹೇಳಿದರು. 

ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು ತ್ರಾಸಿ ವಲಯ, ಜನಜಾಗೃತಿ ವೇದಿಕೆ ಕುಂದಾಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ತ್ರಾಸಿ ವಲಯ, ತ್ರಾಸಿ ವಲಯ ಜನಜಾಗೃತಿ ವೇದಿಕೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರಾಸಿ ವಲಯ, ಪಂಚಗಂಗಾವಳಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಗಂಗೊಳ್ಳಿ, ಲಯನ್ಸ್ ಕ್ಲಬ್ ತ್ರಾಸಿ-ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ, ಸವಿತಾ ಸಮಾಜ ಗಂಗೊಳ್ಳಿ ಹಾಗೂ ಶ್ರೀ ಸಿದ್ಧಿ ಫ್ರೀಜರ್ಸ್‌ ಗಂಗೊಳ್ಳಿ ಆಶ್ರಯದಲ್ಲಿ ಹಮ್ಮಿಕೊಂಡ 622ನೇ ಮದ್ಯವರ್ಜನ ಶಿಬಿರದ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ತ್ರಾಸಿ ಇಗರ್ಜಿ ಧರ್ಮಗುರು ಫಾ. ಅನಿಲ್ ಕರ್ನೇಲಿಯೋ, ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ದುಗ್ಗೇ ಗೌಡ, ಜನಜಾಗೃತಿ ವೇದಿಕೆ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಗೌರವಾಧ್ಯಕ್ಷ ರಾಜು ದೇವಾಡಿಗ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ಆಚಾರ್ಯ ಶುಭಾಶಂಸನೆ ನೆರವೇರಿಸಿದರು. 

ಇದೇ ಸಂದರ್ಭ ನಾನಾ ಸ್ಪರ್ಧೆಗಳಲ್ಲಿ ವಿಜೇತರಾದ ನವಜೀವನ ಸಮಿತಿ ಸದಸ್ಯರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಯೋಗ ಶಿಕ್ಷಕ ಸಂದೀಪ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ತ್ರಾಸಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಬಿ. ರಾಘವೇಂದ್ರ ಪೈ, ಸಭಾಭವನದ ಮಾಲೀಕ ಶ್ರೀಧರ ಗಾಣಿಗ, ನಿವೃತ್ತ ಮುಖ್ಯ ಶಿಕ್ಷಕ ರಾಬರ್ಟ್ ಒಲಿವೇರಾ, ಶಂಕರ ಪೂಜಾರಿ, ಶಿಬಿರಾಧಿಕಾರಿ ನಾಗೇಶ ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com