ಸೌಜನ್ಯ ಪ್ರಕರಣ: ಸಿಬಿಐ ತನಿಕೆಗೆ ಆಗ್ರಹಿಸಿ ಬೆಳ್ತಂಗಡಿ, ಉಜಿರೆ ಬಂದ್‌

ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ಇಂದು ಬೆಳ್ತಂಗಡಿ ಹಾಗೂ ಉಜಿರೆ ಬಂದ್‌ಗೆ ಕರೆ ನೀಡಲಾಗಿದ್ದು ಇಡಿಯ ಪಟ್ಟಣ ಇಂದು ಹರತಾಳ ಆಚರಿಸುತ್ತಿದೆ. ಎಲ್ಲ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದು ಯಾವುದೇ ವ್ಯಾಪಾರೀ ಚಟುವಟಿಕೆಗಳಾಗಲೀ, ಜನ ಹಾಗೂ ವಾಹನ ಸಂಚಾರವಾಗಲೀ ಕಂಡುಬರುತ್ತಿಲ್ಲ. 
      ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದ ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆ ಈ ಪ್ರತಿಭಟನೆ ಹಾಗೂ ಬಂದ್‌ ಆಂದೋಲನವನ್ನು ಆಯೋಜಿಸಿದೆ. ಸೌಜನ್ಯ ಕೊಲೆ ಪ್ರಕರಣ ಮಾತ್ರವಲ್ಲದೆ ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಕೆಲವು ವರ್ಷಗಳಿಂದ ಸಂಭವಿಸಿರುವ ಸುಮಾರು 450 ನಾಪತ್ತೆ ಪ್ರಕರಣಗಳು ಹಾಗೂ ಅಸಹಜ ಸಾವಿನ ಪ್ರಕರಣಗಳ ಬಗ್ಗೆಯೂ ನಿಷ್ಪಕ್ಷಪಾತದ ಸಿಬಿಐ ತನಿಖೆ ನಡೆಯಬೇಕೆಂದು ಒತ್ತಾಯಿಸಲಾಗಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com