ಐಸಿಸಿಆರ್‍ಗೆ ಉಪ್ಪಿನಕುದ್ರು ಭಾಸ್ಕರ್ ಕೊಗ್ಗ ಕಾಮತ್ ಆಯ್ಕೆ

ಕುಂದಾಪುರ: ಭಾರತ ಸರಕಾರ ನವದೆಹಲಿಯ ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್ಸ್ (ICCR)ನ ಸದಸ್ಯರಾಗಿ ಅಂತರಾಷ್ಟ್ರೀಯ  ಯಕ್ಷಗಾನ ಗೊಂಬೆಯಾಟ ಕಲಾವಿದ ಉಪ್ಪಿನಕುದ್ರು ಭಾಸ್ಕರ್ ಕೊಗ್ಗ ಕಾಮತ್ ಆಯ್ಕೆಯಾಗಿದ್ದಾರೆ.
      ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯ ನಿರ್ದೇಶಕರಾಗಿ ಅಳಿವಿನಂಚಿನಲ್ಲಿರುವ ಯಕ್ಷಗಾನ ಗೊಂಬೆಯಾಟ ಕಲೆಗೆ ಹೊಸ ಸ್ಪರ್ಶ ನೀಡಿ ದೇಶ ವಿದೇಶಗಳಲ್ಲಿ ಜನಮನ್ನಣೆ ಗಳಿಸಿರುವ ಭಾಸ್ಕರ್ ಕಾಮತ್ ಅವರು ವಿಶ್ವದಲ್ಲೇ ಪ್ರಪ್ರಥಮ ಬಾರಿಗೆ ಉಪ್ಪಿನಕುದ್ರು ಎಂಬ ಪುಟ್ಟ ಗ್ರಾಮದಲ್ಲಿ ಯಕ್ಷಗಾನ ಗೊಂಬೆಯಾಟ ಅಕಾಡೆಮಿ ಸ್ಥಾಪನೆಗೆ ಪಣ ತೊಟ್ಟು ಶ್ರಮಿಸುತ್ತಿದ್ದಾರೆ. ಲೇಖಕರಾಗಿ, ಕಲಾವಿದರಾಗಿ ಹತ್ತು ಹಲವು ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿ ಕೊಂಡು ಹತ್ತಾರು ಪ್ರಶಸ್ತಿ, ಸನ್ಮಾನಗಳನ್ನು ಮುಡಿಗೇರಿಕೊಂಡಿರುವ ಕಾಮತರು ಐಸಿಸಿಆರ್‍ಗೆ ಮುಂದಿನ ಮೂರು ವರ್ಷಗಳವರೆಗೆ ಸದಸ್ಯರಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದು, ಕುಂದಾಪುರಕ್ಕೆ ಹೆಮ್ಮೆಯ ಸಂಗತಿಯಾಗಿದೆ. 

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com