ಅ. 19, 20: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ : ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ವಠಾರದಲ್ಲಿ ಅ. 19 ಮತ್ತು 20ರಂದು ನಡೆಯಲಿರುವ 'ಕೃಷಿಮೇಳ - 2013'ರಲ್ಲಿ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಟ್ಟು ಸುಮಾರು 30,000ಕ್ಕೂ ಅಧಿಕ ಮಂದಿ ರೈತರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು 125ಕ್ಕೂ ಹೆಚ್ಚು ಕೃಷಿ ವಸ್ತುಪ್ರದರ್ಶನ ಮಳಿಗೆಗಳು ಸಿದ್ಧಗೊಂಡಿವೆ.

19ರಂದು ಬೆಳಗ್ಗೆ 10.30ಕ್ಕೆ ಸಚಿವ ವಿನಯ ಕುಮಾರ್‌ ಸೊರಕೆ ಅವರು ಉದ್ಘಾಟಿಸುವರು. ಶಾಸಕ ಪ್ರಮೋದ್‌ ಮಧ್ವರಾಜ್‌ ಅಧ್ಯಕ್ಷತೆ ವಹಿಸಲಿದ್ದಾರೆ. ನೂತನ ಕೃಷಿ ತಂತ್ರಜ್ಞಾನಗಳ ಬಗ್ಗೆ ತಿಳುವಳಿಕೆ, ಚರ್ಚಾಗೋಷ್ಠಿ, ಪ್ರಾತ್ಯಕ್ಷಿಕೆ, ತಜ್ಞರೊಂದಿಗೆ ಸಮಾಲೋಚನೆ, ಕ್ಷೇತ್ರ ಭೇಟಿ ಮೂಲಕ ಕೃಷಿಯಲ್ಲಿ ಪ್ರಗತಿ ಸಾಧಿಸಲು, ಕೃಷಿ ಸಮಸ್ಯೆ ಬಗೆಹರಿಸಿಕೊಳ್ಳಲು ವೇದಿಕೆ ಒದಗಿಸಿ ಕೊಡುವುದೇ ಕೃಷಿಮೇಳದ ಉದ್ದೇಶವಾಗಿದೆ.

ಪ್ರದರ್ಶನ / ಪ್ರಾತ್ಯಕ್ಷಿಕೆ

ವಿವಿಧ ಭತ್ತದ ತಳಿಗಳ ಪ್ರದರ್ಶನ, ಮಾಹಿತಿ, ಚಾಪೆ ನೇಜಿ ತಯಾರಿ, ಶ್ರೀಪದ್ಧತಿ ಬೇಸಾಯ ಮಾಹಿತಿ, ಸಿಒ-4 ಮೇವಿನ ಹುಲ್ಲಿನ ಪ್ರಾತ್ಯಕ್ಷಿಕೆ ಮತ್ತು ಬೀಜ ಮಾರಾಟ, ತೆಂಗಿನಲ್ಲಿ ಬಹುಬೆಳೆ ಯೋಜನೆ ಮತ್ತು ಪೋಷಕಾಂಶಗಳ ನಿರ್ವಹಣೆ, ಸಾವಯವ ಗೊಬ್ಬರ, ಕಾಂಪೋಸ್ಟ್‌, ಎರೆಗೊಬ್ಬರ, ಅಜೋಲಾ ಗೊಬ್ಬರ ತಯಾರಿಕೆ ಪ್ರಾತ್ಯಕ್ಷಿಕೆ, ಹೈನುಗಾರಿಕೆ, ಮೀನುಗಾರಿಕೆ, ಆಡು, ಮೊಲ, ಕೋಳಿ, ಬಾತುಕೋಳಿ ಸಾಕಣಿಕೆ ಪ್ರಾತ್ಯಕ್ಷಿಕೆ, ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ, ಮೌಲ್ಯಾಧಾರಿತ ಆಹಾರ ಉತ್ಪನ್ನಗಳು ಮತ್ತು ಪ್ರಾತ್ಯಕ್ಷಿಕೆ, ಅಲಂಕಾರಿಕ ಗಿಡಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಮೊದಲಾದವು ಈ ಬಾರಿಯ ಕೃಷಿ ಮೇಳದ ವಿಶೇಷ ಆಕರ್ಷಣೆಗಳಾಗಿವೆ .

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com