ಸಿಆರ್‌ಝಡ್ ತರಬೇತಿ

ಕುಂದಾಪುರ: ಬೆಂಗಳೂರಿನ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ಆಶ್ರಯದಲ್ಲಿ ತಾಪಂ ಸದಸ್ಯರು ಮತ್ತು ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಕುಂದಾಪುರ ತಾಪಂ ಸಭಾಂಗಣದಲ್ಲಿ ಕರಾವಳಿ ನಿಯಂತ್ರಣ ವಲಯ ತರಬೇತಿ ಜರುಗಿತು. ಕುಂದಾಪುರ ತಾಪಂ ಅಧ್ಯಕ್ಷೆ ದೀಪಿಕಾ ಶೆಟ್ಟಿ ಉದ್ಘಾಟಿಸಿದರು. 2011ರ ಸಿಆರ್‌ಝಡ್ ಅಧಿಸೂಚನೆ ಕುರಿತು ಜನ ಸಾಮಾನ್ಯರಿಗೆ ಮಾಹಿತಿ ನೀಡುವುದು ಅತ್ಯಗತ್ಯ. ಈ ನೆಲೆಯಲ್ಲಿ ಎಲ್ಲ ಹಂತದ ಜನಪ್ರತಿನಿಧಿಗಳು ಅಧಿಸೂಚನೆಯ ಸಂಪೂರ್ಣ ಮಾಹಿತಿ ಪಡಕೊಳ್ಳಬೇಕು. ಜನಪ್ರತಿನಿಧಿಗಳು ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಿದಲ್ಲಿ ಅನುಷ್ಠಾನಕ್ಕೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗಣಪತಿ ಟಿ. ಶ್ರೀಯಾನ್ ಮಾತನಾಡಿ, ಅಧಿಸೂಚನೆಯ ಅನುಷ್ಠಾನದಿಂದ ಕರಾವಳಿ ವಲಯದಲ್ಲಿ ವಾಸವಿರುವ ಜನರಿಗೆ ತೊಂದರೆಯಾಗಬಾರದು ಎಂದು ಹೇಳಿದರು. 

ಬೆಂಗಳೂರು ಎಂಪ್ರಿ ತರಬೇತಿ ಸಂಸ್ಥೆಯ ಮುಖ್ಯಸ್ಥ ಬಸವರಾಜ್ ಮಾತನಾಡಿ, ರಾಜ್ಯದ 30 ಜಿಲ್ಲೆಗಳಲ್ಲಿ ಹಲವು ಕಾರ್ಯಕ್ರಮ ನಡೆಸಿ ಪರಿಸರದ ಬಗ್ಗೆ ಮಾಹಿತಿ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸಿಆರ್‌ಝಡ್ ಕಾನೂನು ಮತ್ತು ಪರಿಹಾರ ಮಾರ್ಗೋಪಾಯಗಳ ಬಗ್ಗೆ ಮಾಹಿತಿ ನೀಡಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. 

ಕುಂದಾಪುರ ಪುರಸಭೆ ಅಧ್ಯಕ್ಷೆ ಕಲಾವತಿ, ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಮೊಗವೀರ, ಕಾರ್ಯ ನಿರ್ವಹಣಾಧಿಕಾರಿ ಗೋಪಾಲ ಶೆಟ್ಟಿ ಹಾಜರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಎನ್.ಎ. ಮಧ್ಯಸ್ಥ, ಅಶೋಕ್ ಆರ್. ಭಟ್, ಗಣೇಶ್ ಕೆ., ಮಹೇಶ್ ಕುಮಾರ್ ಭಾಗವಹಿಸಿದ್ದರು. ಸದಾಶಿವ ಪ್ರಾರ್ಥಿಸಿದರು. ಗಣೇಶ್ ಕೆ. ವಂದಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com