ವಿವೇಕಾನಂದ ಜನ್ಮವರ್ಷಾಚರಣೆ

ಗಂಗೊಳ್ಳಿ: ಯಳಜಿತ್ ಗ್ರಾಮದ ಸಿದ್ಧಿವಿನಾಯಕ ಸಾಂಸ್ಕøತಿಕ ಕೇಂದ್ರದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 150ನೇ ಜನ್ಮಜಯಂತಿ ವರ್ಷಾಚರಣೆ ಮತ್ತು ವಿದ್ಯಾರ್ಥಿಗಳಿಗೆ ವಿವೇಕಾನಂದರ ಕುರಿತ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಟೋಬರ್ 2ರಂದು ಜರಗಿತು.
    ಜಿಎಸ್‍ವಿಎಸ್ ಸಂಸ್ಥೆಯ ಅಧ್ಯಕ್ಷ ಬೈಲೂರು ಮಂಜುನಾಥ ಶೆಣೈ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿವೇಕಾನಂದರ ಸಂದೇಶಗಳು ಪ್ರತಿಯೊಬ್ಬರ ಜೀವನಕ್ಕೆ ದಾರಿದೀಪದಂತಿವೆ. ಸತ್ಯ, ಅಹಿಂಸೆ, ತ್ಯಾಗ ಎಂಬ ಅಮೂಲ್ಯವಾದ ಮೌಲ್ಯಗಳನ್ನು ಸಾರಿದ ಮಹಾತ್ಮ ಗಾಂದಿಯವರಂತೆಯೇ ವಿವೇಕಾನಂದರು  ಭಾರತೀಯರ ಆತ್ಮಗೌರವವನ್ನು ಬಡಿದೆಬ್ಬಿಸಿದ ಮಹಾನ್ ವ್ಯಕ್ತಿ ಎಂದರು. 
    ಮುಖ್ಯ ಅತಿಥಿ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಸಂಚಾಲಕ ಮಂಗೇಶ್ ಶೆಣೈ ಅವರು ವಿವೇಕಾನಂದರ ಕುರಿತು ವಿಶೇಷ ಉಪನ್ಯಾಸ ನೀಡಿದರು. ನಿವೃತ್ತ ಮುಖ್ಯಶಿಕ್ಷಕ ನಾಗರಾಜ ಕೊಡಂಚ, ಗ್ರಾಮ ಪಂಚಾಯತ್ ಸದಸ್ಯ ರಾಘವೇಂದ್ರ ದೇವಾಡಿಗ, ಶಾಲಾ ಅಕ್ಷರ ದಾಸೋಹ ಸಮಿತಿಯ ಗೋಪಾಲಕೃಷ್ಣ ಶೆಣೈ ಮೊದಲಾದವರು ಉಪಸ್ಥಿತರಿದ್ದರು.
    ಮುಖ್ಯಶಿಕ್ಷಕಿ ಸುಮನಾ ಬಾೈ ಅವರು ಸ್ವಾಗತಿಸಿದರು. ಕಾರ್ಯಕ್ರಮದ ನಿರ್ದೇಶಕ, ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕ ನಾರಾಯಣ ಶೆಟ್ಟಿ ಅವರು ವಂದಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com