ಗಂಗೊಳ್ಳಿಯಲ್ಲಿ ಜ್ಞಾನಾರ್ಜನೆ ಶಿಬಿರ ಉದ್ಘಾಟನೆ

ಗಂಗೊಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ, ಅಮೃತಾ ಯುವತಿ ಮಂಡಲ, ಅರ್ಚನಾ ಮಹಿಳಾ ಮಂಡಲ ಮೇಲ್ಗಂಗೊಳ್ಳಿ, ರೋಟರಿ ಕ್ಲಬ್ ಕುಂದಾಪುರ, ಸ್ಫೂರ್ತಿ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ ಕೋಟೇಶ್ವರ ಹಾಗೂ ಕೆನರಾ ಬ್ಯಾಂಕ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 9ನೇ ವರ್ಷದ ಜ್ಞಾನಾರ್ಜನ ಶಿಬಿರದ ಉದ್ಘಾಟನೆ ಇತ್ತೀಚಿಗೆ ಜರಗಿತು.
ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜಿನ ಸಹಶಿಕ್ಷಕ ಗೋಪಾಲ ದೇವಾಡಿಗ ಶಿಬಿರವನ್ನು ಉದ್ಘಾಟಿಸಿದರು. ಶಾಲೆಯ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ವಾಮನದಾಸ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶಿಕ್ಷಕ ನಾಗರಾಜ ಶುಭಾಶಂಸನೆಗೈದರು. ಶಿಬಿರದ ನಿರ್ದೇಶಕ ನಾರಾಯಣ ಇ. ನಾಯ್ಕ್, ಮಹಿಳಾ ಮಂಡಲದ ಅಧ್ಯಕ್ಷೆ ಭೂದೇವಿ ಉಪಸ್ಥಿತರಿದ್ದರು.
ಸಂಸ್ಥೆಯ ಸಾಂಸ್ಕೃತಿಕ ಕಾರ್ಯದರ್ಶಿ ರಾಘವೇಂದ್ರ ಸ್ವಾಗತಿಸಿದರು. ಯುವಕ ಮಂಡಲದ ಮಾಜಿ ಅಧ್ಯಕ್ಷ ಭಾಸ್ಕರ ಎಚ್.ಜಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ರಂಜಿತ್ ಕಾರ್ಯಕ್ರಮ ನಿರೂಪಿಸಿದರು. ಕಿರಣ್ ವಂದಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com