ಮಲ್ಯರ ಮಠದಲ್ಲಿ ಜ್ಞಾನಗಂಗಾ ಕಾರ್ಯಕ್ರಮ

ಗಂಗೊಳ್ಳಿ: ಭಗವಂತನಲ್ಲಿ ಶ್ರದ್ಧೆಯಿಟ್ಟು, ನಿಸ್ವಾರ್ಥವಾಗಿ ಮಾಡಿದ ಎಲ್ಲ ಕಾರ್ಯಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ. ಗೌಡ ಸಾರಸ್ವರ ಬ್ರಾಹ್ಮಣ ಸಮಾಜವು ಎಲ್ಲ ಸಮಾಜವನ್ನು ಗೌರವಿಸುತ್ತಾ ಜೀವನ ನಡೆಸುತ್ತಿದೆ. ನಮ್ಮ ಸಮಾಜದ ಮುಂದೆ ಕಠಿಣ ಸವಾಲುಗಳು ಹಾಗೂ ಅನೇಕ ಸಮಸ್ಯೆಗಳು ನಮ್ಮ ಮುಂದಿದ್ದು, ಅವುಗಳನ್ನು ಯಶಸ್ವಿಯಾಗಿ ನಿಭಾಯಿಸಲು ಹಾಗೂ ಪರಿಹರಿಸಲು ಎಲ್ಲರೂ ಒಗ್ಗಟ್ಟಿನಿಂದ ಇದ್ದರೆ ಮಾತ್ರ ಸಾಧ್ಯವಿದೆ ಎಂದು ಉಡುಪಿ ಜಿಲ್ಲೆಯ ಜಿಎಸ್‌ಬಿ ಹಿತರಕ್ಷಣಾ ವೇದಿಕೆ ಸಂಚಾಲಕ ಆರ್. ವಿವೇಕಾನಂದ ಶೆಣೈ ಹೇಳಿದರು.
ಗಂಗೊಳ್ಳಿಯ ನಿನಾದ ಸಂಸ್ಥೆಯ ಆಶ್ರಯದಲ್ಲಿ ಸ್ಥಳೀಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಜ್ಞಾನಗಂಗಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ಪರವಾಗಿ ಉಡುಪಿ ಜಿಲ್ಲೆಯ ಜಿಎಸ್‌ಬಿ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್. ವಿವೇಕಾನಂದ ಶೆಣೈ ಅವರನ್ನು ಮಾಜಿ ಮಂಡಲ ಪ್ರಧಾನ ಬಿ. ಸದಾನಂದ ಶೆಣೈ ಸನ್ಮಾನಿಸಿ ಗೌರವಿಸಿದರು. ಜ್ಞಾನಗಂಗಾ ಕಾರ್ಯಕ್ರಮದ ಅಧ್ಯಕ್ಷ ಕೆ. ಕೃಷ್ಣ ಭಟ್, ಉಪಾಧ್ಯಕ್ಷ ಶಾಂತಾರಾಮ ಭಟ್, ಕಾರ್ಯದರ್ಶಿ ಗಣೇಶ ನಾಯಕ್, ನಿನಾದ ಸಂಸ್ಥೆಯ ಅಧ್ಯಕ್ಷ ಎಂ. ಮುಕುಂದ ಪೈ, ಸುದರ್ಶನ ವಿ. ಆಚಾರ್ಯ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com