ಪರಿಶಿಷ್ಟ ವರ್ಗದ ಕಲಾವಿದರಿಂದ ಅರ್ಜಿ ಆಹ್ವಾನ

ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2013 - 14ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ವರ್ಗದ ಕಲಾವಿದರಿಗೆ ದ. ಕ. ಜಿಲ್ಲೆಯಾದ್ಯಂತ ಸುಗಮ ಸಂಗೀತ, ಜಾನಪದ ಸಂಗೀತ, ನೃತ್ಯ, ಯಕ್ಷಗಾನ, ನಾಟಕ, ವಾದ್ಯ, ಸಂಗೀತ ಮೊದಲಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕಾರ್ಯಕ್ರಮ ನೀಡಲಿಚ್ಚಿಸುವವರು ಆಕಾಶವಾಣಿ, ದೂರದರ್ಶನ ಕಲಾವಿದರಾಗಿರಬೇಕು ಅಥವಾ ಪ್ರಥಮ ದರ್ಜೆ (ಸೀನಿಯರ್‌ ಗ್ರೇಡ್‌) ಸಂಗೀತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತಮ್ಮ ಕಲಾಸೇವೆಯ ದಾಖಲೆ ಹಾಗೂ ಧೃಢೀಕೃತ ಜಾತಿ ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು ಅ. 30ರೊಳಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com