ಅ.19, 20: ವಿಶ್ವ ಕನ್ನಡ ವಚನ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಬೆಂಗಳೂರಿನ ಶ್ರೀ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ ಆಶ್ರಯದಲ್ಲಿ, ಅ. 19 ಮತ್ತು 20ರಂದು ದೆಹಲಿ ಕರ್ನಾಟಕ ಸಂಘದಲ್ಲಿ 2ನೇ ವಿಶ್ವ ಕನ್ನಡ ವಚನ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಟ್ರಸ್ಟ್‌ನ ಸಂಸ್ಥಾಪಕ ಕಾರ್ಯದರ್ಶಿ ಎಚ್‌. ಸೋಮಶೇಖರ್‌ ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನವನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ| ಚಂದ್ರಶೇಖರ ಕಂಬಾರ ಅವರು ಉದ್ಘಾಟಿಸಲಿದ್ದು, ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.

ವಿವಿಧ ಸಾಹಿತ್ಯ ಗೋಷ್ಠಿಗಳು, ಮಹಿಳಾ ಗೋಷ್ಠಿಗಳು, ವಿಶೇಷ ಉಪನ್ಯಾಸಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಚಿವರಾದ ಯು.ಟಿ. ಖಾದರ್‌, ಮಹಾರಾಷ್ಟ್ರ ಸರಕಾರದ ಶಾಸಕ ಜಗನ್ನಾಥ ಶೆಟ್ಟಿ, ಧಾರವಾಡದ ಮಾಜಿ ಶಾಸಕ ಚಂದ್ರಕಾಂತ್‌ ಬೆಲ್ಲದ, ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸದಾನಂದ ಶೆಟ್ಟಿ ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com