ಕೃಷಿ ಇಲಾಖೆಗೆ 100 ವರ್ಷ; ಕೃಷಿ ಮೇಳಕ್ಕೆ ನಿರ್ಧಾರ: ಸಚಿವ ಸೊರಕೆ

ಕುಂದಾಪುರ: ಕೃಷಿ ಇಲಾಖೆಗೆ 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ತಾಲೂಕು ಕೇಂದ್ರದಲ್ಲಿ ಕೃಷಿ ಮೇಳ ಆಚರಿಸಲು ತೀರ್ಮಾನಿಸಲಾಗಿದ್ದು 2014 ಜನವರಿ ಕೊನೆಯ ವಾರದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ಕೃಷಿ ಮೇಳ ನಡೆಸಲು ನಿರ್ಧರಿಸಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ ಸೊರಕೆ ಹೇಳಿದರು. ಶುಕ್ರವಾರ ಮಧ್ಯಾಹ್ನ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಕೃಷಿ ಮೇಳದಲ್ಲಿ ಶೇ.90ರಷ್ಟು ಕೃಷಿಕರೆ ಭಾಗವಹಿಸವಂತಾಗಬೇಕು. ಪ್ರಗತಿಪರ ಕೃಷಿಕರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಭಾರತೀಯ ಕಿಸಾನ್ ಸಂಘ, ಕೃಷಿಕ ಸಮಾಜ, ರೈತ ಸಂಘ ಹೀಗೆ ರೈತಮುಖಿ ಸಂಘಟನೆಗಳ ಸಹಯೋಗದೊಂದಿಗೆ ಕಾರ್ಯಕ್ರಮ ಅರ್ಥಪೂರ್ಣ ನಡೆಸಲು ಯೋಚಿಸಲಾಗಿದೆ ಎಂದರು. 

ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಉಪೇಂದ್ರ ನಾಯಕ್ ಅಗತ್ಯ ಸಲಹೆ ಸೂಚನೆ ನೀಡಿದರು. ತಾಲೂಕು ಕೃಷಿಕ ಸಮಾಜದ ಅಶೋಕಕುಮಾರ ಕೊಡ್ಗಿ, ಬಸ್ರೂರು ದೇವಾನಂದ ಶೆಟ್ಟಿ, ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಕೃಷಿ ಅದಿಕಾರಿ ವಿಷ್ಣು, ಬಸ್ರೂರು ವಿಕಾಸ ಹೆಗ್ಡೆ, ಮಲ್ಯಾಡಿ ಶಿವರಾಮ ಶೆಟ್ಟಿ ಮೊದಲಾದವರು ಅನಿಸಿಕೆ ಹಂಚಿಕೊಂಡರು. 

ಉಡುಪಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಕಾರಿ ಎಸ್.ಎ.ಪ್ರಭಾಕರ ಶರ್ಮ, ಕುಂದಾಪುರ ಸಹಾಯಕ ಕಮಿಶನರ್ ಯೋಗೀಶ್ವರ, ಕುಂದಾಪುರ ತಾಲೂಕು ಪಂಚಾಯಿತಿ ಅಧ್ಯಕ್ಷೆ ದೀಪಿಕಾ ಶೆಟ್ಟಿ, ಕುಂದಾಪುರ ತಹಸೀಲ್ದಾರ ಗಾಯತ್ರಿ ಎನ್.ನಾಯಕ್ ಉಪಸ್ಥಿತರಿದ್ದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com