ಹವ್ಯಾಸಿ ಯಕ್ಷಗಾನ ಕಲಾವಿದರ ಒಕ್ಕೂಟ ಉದ್ಘಾಟನೆ

ಬೈಂದೂರು: ಇಂದು ಕನ್ನಡ ಭಾಷೆಯನ್ನು ಉಳಿಸಿ ಬೆಳಸುವಲ್ಲಿ ಯಕ್ಷಗಾನದ ಪಾತ್ರ ಮಹತ್ವದಾಗಿದ್ದು, ಈ ಕಲೆಯನ್ನು ಮುಂದಿನ ತಲೆಮಾರಿಗೆ ಪರಿಚುಸಿ, ವರ್ಗಾುಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ. ಆ ನಿಟ್ಟಿನಲ್ಲಿ ಯಕ್ಷಚೇತನದಂತಹ ಸಂಸ್ಥೆಗಳು ಕಾರ್ಯೋನ್ಮುಖವಾಗಬೇಕಿದೆ ಎಂದು ಹಿರಿಯ ಯಕ್ಷಗಾನ ವಿದ್ವಾಂಸ ಹೇರಂಜಾಲು ಸುಬ್ಬಣ್ಣ ಗಾಣಿಗ ಹೇಳಿದರು. 

ಇಲ್ಲಿನ ರೋಟರಿ ಭವನದಲ್ಲಿ ನಡೆದ ಹವ್ಯಾಸಿ ಯಕ್ಷಗಾನ ಕಲಾವಿದರ ಒಕ್ಕೂಟ ಯಕ್ಷಚೇತನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬೆಂದೂರು ರೋಟರಿ ಮಾಜಿ ಗವರ್ನರ್ ಬಿ.ಜಗನ್ನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ದಶ್ಯ ಮಾಧ್ಯಮಗಳ ಪ್ರಭಾವದಿಂದ ಕರಾವಳಿ ಜಿಲ್ಲೆಗಳ ಗಂಡು ಕಲೆ ಯಕ್ಷಗಾನ ಇಂದು ಅಳಿವಿನಂಚಿನಲ್ಲಿರುವುದು ಆತಂಕಕಾರಿ ವಿಷಯವಾಗಿದೆ. ನರ್ತನ, ಗಾಯನ, ಚಿತ್ರಣವಿರುವ ಯಕ್ಷಗಾನದಿಂದ ಪುರಾಣ, ಸಂಸ್ಕೃತಿಯ ಅರಿವು ನಮಗಾಗುತ್ತದೆ. ಹಾಗಾಗಿ ಯಕ್ಷಗಾನವನ್ನು ಉಳಿಸುವಲ್ಲಿ ಇಂತಹ ಸಂಘಟನೆಗಳು ಅತ್ಯಗತ್ಯವಾಗಿದೆ ಎಂದರು. 

ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಗೋವಿಂದ ಎಂ, ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸುಬ್ರಹ್ಮಣ್ಯ ಭಟ್, ಗ್ರಾ.ಪಂ ಅಧ್ಯಕ್ಷೆ ರಾಧಾ ಪೂಜಾರಿ, ಯಕ್ಷಚೇತನದ ಅಧ್ಯಕ್ಷ ಅಣ್ಣಪ್ಪ ಶೇರುಗಾರ್ ಉಪಸ್ಥಿತರಿದ್ದರು. ಅಣ್ಣಪ್ಪ ಶೇರುಗಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು ಸಂಘಟನಾ ಕಾರ್ಯದರ್ಶಿ ತಿಮ್ಮಪ್ಪ ಗಾಣಿಗ ಕಾರ್ಯಕ್ರಮ ನಿರೂಪಿಸಿದರು. 

ಬಳಿಕ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬೆಂದೂರು ಕನ್ನಡ ಸಾಹಿತ್ಯ ಪರಿಷತ್ತು, ರೋಟರಿ ಕ್ಲಬ್ ಬೆಂದೂರು ಹಾಗೂ ಯಕ್ಷಚೇತನ ಸಂಸ್ಥೆಗಳ ಸಹಯೋಗದಲ್ಲಿ ಯಕ್ಷಗಾನ ತಾಳಮದ್ದಳೆ 'ಕರ್ಣಾರ್ಜುನ' ಪ್ರದರ್ಶನಗೊಂಡಿತು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com