ಮರವಂತೆಯಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

ಮರವಂತೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ ಘಟಕ, ಭಾರತೀಯ ಕುಟುಂಬ ಕಲ್ಯಾಣ ಯೋಜನಾ ಸಂಘ(ಜೆ.ಟಿ.ಎಫ್)ದ ಉಡುಪಿ ಜಿಲ್ಲಾ ಶಾಖೆ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಯುಕ್ತವಾಗಿ ಮಣಿಪಾಲದ ಕೆ. ಎಂ. ಸಿ. ಆಸ್ಪತ್ರೆಯ ಸಹಯೋಗದಲ್ಲಿ ಗುರುವಾರ ನಡೆಸಿದ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಕೆ. ಎ. ಸುಗುಣಾ ಉದ್ಘಾಟಿಸಿದರು.
   ಮುಖ್ಯ ಅತಿಥಿಯಾಗಿದ್ದ ಭಾರತೀಯ ಕುಟುಂಬ ಕಲ್ಯಾಣ ಯೋಜನಾ ಸಂಘದ ಉಡುಪಿ ಶಾಖೆಯ ಅಧ್ಯಕ್ಷ ಪ್ರಕಾಶ ಜಿ. ಅಂದ್ರಾದೆ ಕ್ಯಾನ್ಸರ್ ಮಾರಕ ಕಾಯಿಲೆ ಎನಿಸಿದ್ದರೂ, ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿದರೆ ಅದನ್ನು ಗುಣಪಡಿಸಲು ಸಾಧ್ಯ. ಆದುದರಿಂದ ರೋಗದ ಲಕ್ಷಣ ಕಂಡುಬಂದ ಅಥವಾ ಆ ಕುರಿತು ಸಂಶಯ ಬಾಧಿಸಿದ ತಕ್ಷಣ ವೈದ್ಯರಿಂದ ಪರೀಕ್ಷಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. 
    ಸಂಘದ ಕಾರ್ಯಕರ್ತೆ ಐವಿ ಕ್ರಾಸ್ಟಾ ಸ್ವಾಗತಿಸಿ ವಂದಿಸಿದರು. ಮಣಿಪಾಲ ಆಸ್ಪತ್ರೆಯ ವೈದ್ಯರಾದ ಡಾ. ರೂಪಾ, ಡಾ. ಪವಿತ್ರಾ, ಡಾ. ಪ್ರೀತಿ, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ ಗೌಡ, ಗ್ರಾ. ಪಂ. ಮಾಜಿ ಅಧ್ಯಕ್ಷ ಎಸ್. ಜನಾರ್ದನ ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com