ಧರ್ಮಸ್ಥಳ ಲಕ್ಷ ದೀಪೋತ್ಸವ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಡಿ. 3ರ ವರೆಗೆ ಲಕ್ಷ ದೀಪೋತ್ಸವ, ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನ ನಡೆಯಲಿವೆ.
    ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ನಡೆಯಲಿದ್ದು, ಪ್ರತಿದಿನ ರಾತ್ರಿ 9 ಗಂಟೆ ಅನಂತರ ನ. 28ರಂದು ಹೊಸಕಟ್ಟೆ ಉತ್ಸವ ನಡೆಯಲಿದೆ.
     ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ನ. 28ರಂದು ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಬೆಳ್ತಂಗಡಿ ಹೋಲಿ ರಿಡಿಮರ್‌ ಚರ್ಚ್‌ನ ಪ್ರಧಾನ ಧರ್ಮಗುರು ಫಾ| ಜೇಮ್ಸ್‌ ಡಿಸೋಜ ಉದ್ಘಾಟಿಸಲಿದ್ದು, ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ.
       ವಸ್ತು ಪ್ರದರ್ಶನ ಮಂಟಪದಲ್ಲಿ ನ. 28ರಂದು ಸಂಜೆ ಇಂದ್ರಜಾಲ, ರಾತ್ರಿ ಭಕ್ತಿ - ಭಾವ - ಜಾನಪದ ಗಾಯನ ನಡೆಯಲಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com