ದೈಹಿಕ ಶಿಕ್ಷಕರಿಗೆ ಹೆಚ್ಚಿನ ಶೈಕ್ಷಣಿಕ ಪ್ರಾಶಸ್ತ್ಯ ಸಚಿವ ಕಿಮ್ಮನೆ

ಕುಂದಾಪುರ: ದೈಹಿಕ ಶಿಕ್ಷಕರಿಗೆ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಪ್ರಾಶಸ್ತ್ಯ ನೀಡುವ ಬಗ್ಗೆ ಸರಕಾರ ಚಿಂತನೆ ನಡೆಸಿದ್ದು , ಮುಂದಿನ ದಿನಗಳಲ್ಲಿ ಆಮೂಲಾಗ್ರ ಬದಲಾವಣೆಯ ಮೂಲಕ ದೈಹಿಕ ಶಿಕ್ಷಕರಿಗೂ ಸರಿಯಾದ ನ್ಯಾಯ ಒದಗಿಸುವಲ್ಲಿ ಶ್ರಮಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದರು.
     ಅವರು ಕುಂದಾಪುರದಲ್ಲಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮಾತನಾಡುತ್ತಿದ್ದರು. ದೈಹಿಕ ಶಿಕ್ಷಕರಿಗೆ ಸೂಕ್ತ ಬಡ್ತಿ ನೀಡುವಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. 200 ವಿದ್ಯಾರ್ಥಿಗಳು ಇಲ್ಲದ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ರದ್ದುಗೊಳಿಸುವ ಈಗಾಗಲೇ ಶೈಕ್ಷಣಿಕ ಹೊಸನೀತಿಯನ್ನು ಹಾಗೂ 120 ವಿದ್ಯಾರ್ಥಿಗಳಿಗಿಂತ ಕಡಿಮೆ ಇರುವ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯ ಹುದ್ದೆ ರದ್ದುಗೊಳಿಸುವ ನೀತಿಯನ್ನು ಸಡಿಲಗೊಳಿಸುವ ಬಗ್ಗೆ ಈಗಾಗಲೇ ಚಿಂತನೆ ನಡೆಸಲಾಗಿದೆ ಎಂದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com