ಮರವಂತೆ ಕ್ರಿಡಾಂಗಣ ನಿರ್ಮಾಣಕ್ಕೆ ಕ್ರಮ: ಕೆ. ಬಾಬು ಶೆಟ್ಟಿ


ಮರವಂತೆ: ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪಂಚಾಯತ್ ಸದಸ್ಯ ಕೆ. ಬಾಬು ಶೆಟ್ಟಿ ಹೇಳಿದರು. 
  ಇಲ್ಲಿನ ಕ್ರೀಡಾಂಗಣದಲ್ಲಿ ಬುಧವಾರ ಆರಂಭವಾದ ಬೈಂದೂರು ವಲಯ ಪ್ರಾಥಮಿಕ ಶಾಲೆಗಳ ಕ್ರಿಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. 
  ಇಲ್ಲಿ ಪಂಚಾಯತ್ ಯುವ ಖೇಲ್ ಅಭಿಯಾನದಡಿ ಮಂಜೂರಾದ 1 ಲಕ್ಷ ರೂಪಾಯಿಯಿಂದ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ದೊರಕಿದೆ. ಪರಿಸರದ ಶಾಲೆಗಳ ಕ್ರೀಡಾ ಚಟುವಟಿಕೆಗೆ ಸುಸಜ್ಜಿತ ಕ್ರೀಡಾಂಗಣದ ಕೊರತೆ ಇದೆ. ವಿವಿಧ ಮೂಲಗಳಿಂದ ಅನುದಾನ ಪಡೆದು ಈಗಿನ ಕ್ರೀಡಾಂಗಣವನ್ನು ಮೇಲ್ದರ್ಜೆಗೇರಿಸಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆಯಿತ್ತರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ. ಎ. ಸುಗುಣಾ ಅಧ್ಯಕ್ಷತೆ ವಹಿಸಿದ್ದರು.
  ಕ್ರೀಡಾಜ್ಯೋತಿ ಬೆಳಗಿದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಕ್ರೀಡಾಂಗಣ ನಿರ್ಮಾಣಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಪೂಜಾರಿ ಕ್ರಿಡಾಧ್ವಜ ಅರಳಿಸಿದರು. ಕ್ರೀಡಾಪಟು ಅಜಿತ್‍ಕುಮಾರ್ ಪ್ರತಿಜ್ಞೆ ಬೋಧಿಸಿದರು. ಮುಖ್ಯೋಪಾಧ್ಯಾಯ ಕೆ. ಗೋಪಾಲ ಸ್ವಾಗತಿಸಿ, ದೈಹಿಕ ಶಿಕ್ಷಣ ಪರಿವೀಕ್ಷಕ ರಾಜು ಪೂಜಾರಿ ಪ್ರಸ್ತಾವನೆಗೈದರು. ಸಹ ಶಿಕ್ಷಕಿ ಸಾವಿತ್ರಿ ವಂದಿಸಿದರು. ಶಿಕ್ಷಕ ಸೀತಾರಾಮ ನಿರೂಪಿಸಿದರು. 
   ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೋಮಯ್ಯ ಬಿಲ್ಲವ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಎಸ್.  ಜನಾರ್ದನ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಸುಂದರ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಜು ಎಸ್, ಶಿಕ್ಷಕರ ಸಂಘದ ಅಧ್ಯಕ್ಷ ಮಹದೇವ ಮಂಜ ಉಪಸ್ಥಿತರಿದ್ದರು. /ಮುಕ್ತಾಯ/ 
ಮರವಂತೆ ನ. 6-1(ಚಿತ್ರ ಇದೆ) 
ಮರವಂತೆ ಸರಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಬುಧವಾರ ಆರಂಭವಾದ ಬೈಂದೂರು ವಲಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಕ್ರೀಡಾಜ್ಯೋತಿ ಬೆಳಗಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com