ಹೆದ್ದಾರಿ ಗುಂಡಿ ಮುಚ್ಚಲು ಗಡುವು

ಬೈಂದೂರು: ಕಳೆದ ಹಲವು ತಿಂಗಳಿಂದ ಬಹತ್ ಗುಂಡಿಗಳಾಗಿ ಮಾರ್ಪಟ್ಟಿರುವ ಶಿರೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿ ಶೀಘ್ರ ಕೆಗೊಳ್ಳದಿದ್ದರೆ ಪ್ರತಿಭಟನೆ ನಡೆಸಲು ಇಲ್ಲಿನ ಸಾರ್ವಜನಿಕರ ವೇದಿಕೆ ನಿರ್ಧರಿಸಿದೆ. 

ಬೆಂದೂರಿನಿಂದ ಶಿರೂರು ತನಕ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ರಸ್ತೆಯಲ್ಲಿ ಬಹದಾಕಾರದ ಗುಂಡಿಗಳಿಂದ ಹಾಗೂ ಧೂಳಿನಿಂದಾಗಿ ವಾಹನ ಸಂಚಾರ ಅಸಾಧ್ಯವಾಗಿದೆ. ಈ ಬಗ್ಗೆ ಪತ್ರಿಕೆ ಹಲವು ಬಾರಿ ವರದಿ ಮಾಡಿದ್ದು, ಇದಕ್ಕೆ ಸ್ಪಂದಿಸಿದ ಶಾಸಕ ಕೆ. ಗೋಪಾಲ ಪೂಜಾರಿ ಮಳೆ ನಿಂತ ಬಳಿಕ ರಸ್ತೆ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದ್ದರು. ಕಳೆದ ವಾರ ಕೊಡೇರಿ ಬಂದರಿಗೆ ಭೇಟಿ ನೀಡಿದ ಸಚಿವ ವಿನಯ ಕುಮಾರ್ ಸೊರಕೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿ ಕುಂದಾಪುರದಿಂದ ಶಿರೂರು ತನಕ ರಾಷ್ಟ್ರೀಯ ಹೆದ್ದಾರಿ ಮರು ಡಾಮರೀಕರಣಕ್ಕಾಗಿ 84 ಲಕ್ಷ ರೂ. ಬಿಡುಗಡೆಯಾಗಿದ್ದು, ನ.15ರೊಳಗೆ ಕಾಮಗಾರಿ ಆರಂಭಿಸಲಾಗುವುದು ಎಂದಿದ್ದರು. 

ಆದರೆ, ಕಾಮಗಾರಿ ಪ್ರಾರಂಭವಾಗುವ ಲಕ್ಷಣ ತೋರುತ್ತಿಲ್ಲ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಈ ಹಿನ್ನೆಲೆಯಲ್ಲಿ ಶಿರೂರಿನ ಸಾರ್ವಜನಿಕರು ಪಂಚಾಯಿತಿ ಸಭಾಭವನದಲ್ಲಿ ಸಭೆ ನಡೆಸಿ ನಿರ್ಣಯಕ್ಕೆ ಬಂದಿದ್ದು, ನ.20ರೊಳಗೆ ಹೆದ್ದಾರಿ ದುರಸ್ತಿ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ನ.21ರಂದು ಶಿರೂರಿನ ಎಲ್ಲ ಅಂಗಡಿ ಮುಚ್ಚಿ ಬೃಹತ್ ಪ್ರತಿಭಟನೆ ನಡೆಸುವ ತೀರ್ಮಾನ ಕೆಗೊಂಡಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com