ಅಗ್ಗದ ಪ್ರಚಾರಕ್ಕಾಗಿ ಕಣ್ಣಿಗೆ ಬಟ್ಟೆ ಕಟ್ಟಿ ಬೈಕ್ ಪ್ರಯಾಣ: ಅಮೃತ್ ಶೆಣೈ

ಉಡುಪಿ: ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವಿಲಾಸ್ ನಾಯಕ್ ಕಣ್ಣಿಗೆ ಬಟ್ಟೆ ಕಟ್ಟಿ ಕುಂದಾಪುರದಿಂದ ಬೆಂಗಳೂರಿಗೆ ಪ್ರಯಾಣಿಸಿರುವುದು ಕೇವಲ ಅಗ್ಗದ ಪ್ರಚಾರ ಎಂದು ಯುವ ಕಾಂಗ್ರೆಸ್ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪಾಧ್ಯಕ್ಷ ಪಿ. ಅಮೃತ್ ಶೆಣೈ ತಿಳಿಸಿದ್ದಾರೆ.
ಉಡುಪಿಯ ಪ್ರಜ್ಞಾವಂತ ಮತದಾರರು ಈ ಹಿಂದೆ ನಡೆದ ಚುನಾವಣೆಗಳಲ್ಲಿ ಇಂತಹ ಪ್ರಚಾರಗಳಿಗೆ ಮರುಳಾಗದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಮುಂದೆ ಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದ ಯುಪಿಎ ಸರ್ಕಾರದ ಸಾಧನೆಗಳನ್ನು ಮೆಚ್ಚಿ ಕಾಂಗ್ರೆಸ್ಸನ್ನು ಗೆಲ್ಲಿಸಲಿದ್ದಾರೆ. ಗುಜರಾತಿನ ಮುಖ್ಯಮಂತ್ರಿ ನರೇಂದ್ರ ಮೋದಿ ದುರಾಡಳಿತವನ್ನು ಕಂಡರೂ ಕಾಣದಂತೆ ವರ್ತಿಸುವ ಉಡುಪಿಯ ಬಿಜೆಪಿ ನಾಯಕರು ಈಗ ಕಣ್ಣಿಗೆ ಬಟ್ಟೆ ಕಟ್ಟಿ ಬೈಕ್ ಚಲಾಯಿಸುವ ಮ್ಯಾಜಿಕ್ ಮಾಡುವ ಮುಖಾಂತರ ಜನತೆಗೆ ಕಣ್ಣಿಗೆ ಮಣ್ಣು ಎರಚುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com