ನ.27: ಬೆಳಗಾವಿಯಲ್ಲಿ ಅತಿಥಿ ಉಪನ್ಯಾಸಕರ ರಾಜ್ಯ ಸಮಾವೇಶ

ಕುಂದಾಪುರ: ನ.27 ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ಅದಿವೇಶನದಲ್ಲಿ ಅತಿಥಿ ಉಪನ್ಯಾಸಕರ ಸಮಸ್ಯೆಗಳಾದ ಸೇವಾಭದ್ರತೆ, ವೇತನ ಹೆಚ್ಚಳಕ್ಕಾಗಿ ಸರಕಾರದ ಗಮನ ಸೆಳೆಯುವ ಸಲುವಾಗಿ ಹಕ್ಕೋತ್ತಾಯ ರಾಜ್ಯ ಸಮಾವೇಶ ಬೆಳಗಾವಿಯ ಚಂದೋಡಿ ಲೀಲಾ ರಂಗ ಮಂದಿರದಲ್ಲಿ ಬೆ.11 ಗಂಟೆಗೆ ನಡೆಯಲಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಯಾವುದೇ ಸಮಸ್ಯೆಗೆ ಸ್ಪಂದಿಸದೇ ಇದ್ದಲ್ಲಿ ಜ.21 ರಂದು ಬೆಂಗಳೂರಿನಲ್ಲಿ ನಡೆಯಲಿರುವ  ಪ್ರತಿಭಟನೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ, ಉಪನ್ಯಾಸಕರ ಬೇಡಿಕೆ ಈಡೇರುವ ತನಕ ಅನಿರ್ಧಿಷ್ಟಾವದಿ ಮುಷ್ಕರ ನಡೆಯಲಿದೆ. ಉಡುಪಿ ಜಿಲ್ಲೆಯ ಎಲ್ಲಾ ಅತಿಥಿ ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ವಕ್ವಾಡಿ ರಂಜಿತ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com