ಬೈಂದೂರು ಬೈಪಾಸ್‌ ಮೇಲ್ಸೆತುವೆ ನಿರ್ಮಾಣಕ್ಕೆ ಸಚಿವ ಆಸ್ಕರ್‌ಗೆ ಮನವಿ

ಶಿರೂರು: ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಹಿನ್ನೆಲೆಯಲ್ಲಿ ಬೈಂದೂರು ಜಂಕ್ಷನ್‌ ಬಳಿ ನಿರ್ಮಿಸಲು ಉದ್ದೇಶಿಸಲಾದ ಎಂಬ್ಯಾಕ್‌ವೆಂಟ್‌ ಬದಲಿಗೆ ಮೇಲ್ಸೆತುವೆ ನಿರ್ಮಿಸಬೇಕು ಎಂದು ಕೇಂದ್ರ ಭೂ ಸಾರಿಗೆ ಸಚಿವ ಆಸ್ಕರ್‌ ಫೆರ್ನಾಂಡಿಸ್‌ ಅವರಿಗೆ ಶಿರೂರಿನಲ್ಲಿ ಮನವಿ ಸಲ್ಲಿಸಲಾಯಿತು.
     ಕಾರವಾರದಿಂದ ಬರುವ ವೇಳೆ ಶಿರೂರು ಗಡಿ ಭಾಗದ ಬಳಿ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹಾಗೂ ರೈಲ್ವೇ ಯಾತ್ರಿ ಸಂಘದ ಸದಸ್ಯರು, ಸಚಿವರು ಸ್ವಾಗತಿಸಿದರು.
       ಈಗಾಗಲೇ ಪ್ರಸ್ತಾಪಿಸಿದಂತೆ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಡಾಂಬರೀಕರಣ, ಬೈಂದೂರು ರೈಲ್ವೇ ನಿಲ್ದಾಣದ ಅಭಿವೃದ್ಧಿ ವಿಚಾರ ಸೇರಿದಂತೆ ವಿವಿದ ವಿಚಾರಗಳ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com