ಶಾಸಕರ ವಿದೇಶ ಪ್ರವಾಸ ರಾಜ್ಯದ ಅಭಿವೃದ್ಧಿಗಲ್ಲ; ಮೋಜಿಗಾಗಿ

ಕುಂದಾಪುರ: ಶಾಸಕರ ವಿದೇಶ ಪ್ರವಾಸದ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗಳು ಕೇಳಿ ಬರುತ್ತಿದ್ದು, ಇದಕ್ಕೆ ಕೇವಲ ಮುಖ್ಯಮಂತ್ರಿ ಹಾಗೂ ಸಭಾಧ್ಯಕ್ಷರು ಮಾತ್ರ ಹೊಣೆಯಲ್ಲ. ಕೇಂದ್ರ ವಿದೇಶಾಂಗ ಇಲಾಖೆಯೂ ಹೊಣೆಯಾಗಿದೆ. ಇಲಾಖೆ ಮುಂದಿನ ದಿನಗಳಲ್ಲಿ ಇಂತಹ ಪ್ರವಾಸಕ್ಕೆ ಅನುಮತಿ ನೀಡಬಾರದು ಎಂದು ಮಾಜಿ ಸಚಿವ ಪಿ.ಜಿ.ಆರ್‌. ಸಿಂಧ್ಯಾ ಹೇಳಿದರು.

ತಿದ್ದುಪಡಿಗೆ ಮನವಿ

ಬೈಂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧ್ಯಯನದ ಹೆಸರಿನಲ್ಲಿ ಶಾಸಕರು ಪ್ರವಾಸ ಕೈಗೊಳ್ಳುವುದು ಕೇವಲ ಮೋಜಿಗಾಗಿ ಮಾತ್ರ ಹೊರತು ರಾಜ್ಯದ ಅಭಿವೃದ್ಧಿಗೆ ಅಲ್ಲ. ಆದುದರಿಂದ ಶಾಸಕರ ಪ್ರವಾಸಕ್ಕೆ ಅನುಮತಿ ನೀಡಬಾರದು ಹಾಗೂ ಮುಂದಿನ ಅವಧಿಯಲ್ಲಿ ತಿದ್ದುಪಡಿ ಮಾಡಬೇಕು ಎಂದು ಮನವಿ ಮಾಡಲಾಗಿದೆ ಎಂದರು.

ಮತ್ತೆ ತೃತೀಯ ರಂಗ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ನಿಶ್ಚಿತ ಬಹುಮತ ಸಿಗುವ ಸಾಧ್ಯತೆ ಇಲ್ಲ. ಪ್ರತಿಯೊಂದು ರಾಜ್ಯದಲ್ಲೂ ಪ್ರಾದೇಶಿಕ ಪಕ್ಷಗಳು ತಮ್ಮ ಶಕ್ತಿ ಹೆಚ್ಚಿಸಿಕೊಳ್ಳುತ್ತಾ ಇದೆ. ಇದು ಮುಂದಿನ ಚುನಾವಣೆಯಲ್ಲಿ ಆ ಪಕ್ಷಗಳಿಗೆ ವರದಾನವಾಗಬಲ್ಲದು. ಮಾತ್ರವಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ಯೇತರ ಪಕ್ಷಗಳು ಒಂದಾಗಿ ತೃತೀಯ ರಂಗ ಮತ್ತೆ ಹುಟ್ಟಿಕೊಳ್ಳಬಹುದು ಎಂದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com