80ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಾ.ಡಿಸೋಜ ಆಯ್ಕೆ

ಬೆಂಗಳೂರು: 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ ನಾ.ಡಿಸೋಜ ಅವರನ್ನು ಆಯ್ಕೆ ಮಾಡಲಾಗಿದೆ.
       2014, ಜನವರಿ 7, 8 ಮತ್ತು 9ರಂದು ಕೊಡಗಿನಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಿಸೋಜ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರು ತಿಳಿಸಿದ್ದಾರೆ.
ಕೊಡಗಿನ ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕಾಗಿ ಡಾ.ಎಂ.ಎಂ ಕಲಬುರ್ಗಿ, ದೇವನೂರು ಮಹಾದೇವ, ಲತಾ ರಾಜಶೇಖರ, ಬಿ.ವಿ.ವೀರಭದ್ರಪ್ಪ ಮತ್ತು ಹಂಪಾ ನಾಗರಾಜಯ್ಯ ಅವರ ಹೆಸರು ಕೇಳಿಬಂದಿದ್ದವು. ಆದರೆ ಅಂತಿಮವಾಗಿ ನಾ.ಡಿಸೋಜ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com