ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಬಿ. ಕಿಶೋರ್ ಕುಮಾರ್

ಕುಂದಾಪುರ: ಬಿಜೆಪಿ ಮುಖಂಡ ಬಿ. ಕಿಶೋರ್ ಕುಮಾರ್ ಕರ್ನಾಟಕ ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ
ಕುಂದಾಪುರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷರಾಗಿ ಎರಡು ಅವಧಿ ಸೇವೆ ಸಲ್ಲಿಸಿದ ಇವರು ಸರಳ ಸಜ್ಜನಿಕೆ ವ್ಯಕ್ತಿತ್ವದಿಂದ ಪಕ್ಷದ ಬೆಳವಣಿಗೆಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಉತ್ತಮ ಸಂಘಟಕರಾಗಿದ್ದರು. ಕುಂದಾಪುರದ ಪ್ರತಿಷ್ಠಿತ ಎಪಿಎಂಸಿ ಅಧ್ಯಕ್ಷರಾಗಿ ಸಂಸ್ಥೆಯ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸಿದ ಹೆಗ್ಗಳಿಕೆಗೆ ಪಾತ್ರರಾದವರು. ಕಳೆದ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಗುರುತಿಸಿ ಕೊಂಡಿರುವ ಕಿಶೋರ್ ಕುಮಾರ್ ಪಕ್ಷಕ್ಕೆ ಸಲ್ಲಿಸಿದ ಅನುಪಮ ಸೇವೆಯ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com