ಡಿ. 22ಕ್ಕೆ ಗಾಳಿಪಟ ಉತ್ಸವ

ಕುಂದಾಪುರ: ಕೋಟೇಶ್ವರ ವಕ್ವಾಡಿಯ ಗುರುಕುಲ ಪಬ್ಲಿಕ್‌ ಸ್ಕೂಲ್‌ ನೇತೃತ್ವದಲ್ಲಿ ಪ್ರವಾಸೋದ್ಯಮ ವರ್ಷದ ಸವಿನೆನಪಿನಲ್ಲಿ ಡಿ. 22ರಂದು ಅಪರಾಹ್ನ 3 ಗಂಟೆಗೆ ಕುಂದಾಪುರ - ಕೋಟೇಶ್ವರ ಕಡಲ ಕಿನಾರೆಯಲ್ಲಿ ವಿದ್ಯಾರ್ಥಿಗಳಿಗಾಗಿ ಗಾಳಿಪಟ ಸ್ಪರ್ಧೆ ಹಾಗೂ ಪ್ರದರ್ಶನದ 'ಗಾಳಿಪಟ ಉತ್ಸವ' ನಡೆಯಲಿದೆ ಎಂದು ಕುಂದಾಪುರದ ಬಾಂಡ್ಯ ಎಜುಕೇಶನ್‌ ಟ್ರಸ್ಟ್‌ನ ಜಂಟಿ ಆಡಳಿತ ನಿರ್ದೇಶಕ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಹೇಳಿದರು. ಅವರು ಕುಂದಾಪುರ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
     ಈ ಗಾಳಿಪಟ ಉತ್ಸವದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಗಾಳಿಪಟ ಸ್ಪರ್ಧೆಯಲ್ಲಿ ದಾಖಲೆ ಮಾಡಿದ ಮಂಗಳೂರಿನ 'ಟೀಂ ಮಂಗಳೂರು' ತಂಡದವರು ಭಾಗವಹಿಸಲಿದ್ದಾರೆ. ಗಾಳಿಪಟ ಉತ್ಸವದಲ್ಲಿ ಪ್ರಾಥಮಿಕ, ಪ್ರೌಢಶಾಲಾ ಹಾಗೂ ಕಾಲೇಜು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಗುವುದು. ಆಸಕ್ತ ಸಾರ್ವಜನಿಕರು ಈ ಉತ್ಸವದಲ್ಲಿ ಗಾಳಿಪಟವನ್ನು ಹಾರಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧಾಳುಗಳು ಶಾಲೆಯ ಧೃಢೀಕರಣ ಪತ್ರದೊಂದಿಗೆ ಹೆಸರು ನೋಂದಾಯಿಸ‌ಬೇಕು. ಇದೇ ಸಂದರ್ಭ ಗುರುಕುಲ ಪಬ್ಲಿಕ್‌ ಸ್ಕೂಲ್‌ನ ವಿದ್ಯಾರ್ಥಿಗಳು ರಚಿಸಿದ ಮರಳು ಶಿಲ್ಪದ ಪ್ರದರ್ಶನ ನಡೆಯಲಿದೆ ಎಂದು ಅವರು ವಿವರಿಸಿದರು.
    ಗಾಳಿಪಟ ಉತ್ಸವವನ್ನು ಸಂಗೀತ ನಿರ್ದೇಶಕ ಗುರುಕಿರಣ್‌ ಉದ್ಘಾಟಿಸುವರು. ಬಾಂಡ್ಯ ಎಜುಕೇಶನ್‌ ಟ್ರಸ್ಟ್‌ನ ಅಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ ಹಾಗೂ ಬಾಂಡ್ಯ ಎಜುಕೇಶನ್‌ ಟ್ರಸ್ಟ್‌ನ ಜಂಟಿ ಆಡಳಿತ ನಿರ್ದೇಶಕಿ ಅನುಪಮಾ ಎಸ್‌. ಶೆಟ್ಟಿ ಭಾಗವಹಿಸಲಿದ್ದಾರೆ ಎಂದರು.
  ಪತ್ರಿಕಾಗೋಷ್ಠಿಯಲ್ಲಿ ಬಾಂಡ್ಯ ಎಜುಕೇಶನ್‌ ಟ್ರಸ್ಟ್‌ನ ಆಡಳಿತಾಧಿಕಾರಿ ಪ್ರಭಾಕರ ಶೆಟ್ಟಿ, ಹರೀಶ್‌ ಸಾಗ ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com