ಬಿಜೆಪಿ ಅಧಿಕಾರಕ್ಕೇರಲು ಕಾರ್ಯಕರ್ತರ ಶ್ರಮ ಅಗತ್ಯ: ಶೀಲಾ ಶೆಟ್ಟಿ

ಕುಂದಾಪುರ:  ಮುಂದಿನ ಚುನಾವಣೆಗಳಲ್ಲಿ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರ­ಬೇಕಾದಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಜವಾಬ್ದಾರಿಯುತವಾಗಿ ನಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಹೆಚ್ಚಿನ ಸಂಖ್ಯೆಯ ಮಹಿಳೆಯರು ಹೆಚ್ಚಿನ ಸಮಯವನ್ನು ಪಕ್ಷ ಸಂಘಟನೆಗಾಗಿ ಮೀಸಲಿಡಬೇಕು’ ಎಂದು ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶೀಲಾ ಶೆಟ್ಟಿ ನುಡಿದರು.
    ಕುಂದಾಪುರದ ಬಿಜೆಪಿ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
     ‘ಜಿಲ್ಲಾ, ಕ್ಷೇತ್ರ ಸಮಿತಿಗಳಲ್ಲದೆ ಸ್ಥಾನೀಯ ಮಟ್ಟದಲ್ಲಿಯೂ ಮಹಿಳಾ ಮೋರ್ಚಾ ಸಂಘಟನೆಗಳನ್ನು ರಚಿಸಿ ಪಕ್ಷ ಸಂಘಟನೆ ಮಾಡಲಾಗುತ್ತಿದೆ. ಹಿಂದೆ ಸಂಪರ್ಕ ಸಾಧನ ಮತ್ತು ಸೌಕರ್ಯಗಳು ಕಡಿಮೆ ಇದ್ದಾಗಲೂ ಪಕ್ಷ ಸಂಘಟನೆಗಳು ಸಮರ್ಪಕವಾಗಿ ನಡೆಯುತ್ತಿತ್ತು. ಆದರೆ ಇದೀಗ ಸೌಕರ್ಯಗಳು ಜಾಸ್ತಿಯಾಗುತ್ತಿ­ರುವುದರಿಂದ ವ್ಯವಸ್ಥಿತ ರೀತಿಯ ಸಂಘಟನೆಗಳು ನಡೆಯುತ್ತಿಲ್ಲ’ ಎಂದು ಹೇಳಿದ ಅವರು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಶಿಸ್ತಿನ ಸೈನಿಕರಂತೆ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಲ್ಲಿ, ಹಿಂದಿನ ಗತವೈಭವವನ್ನು ಮರಳಿ ಪಡೆಯಲು ಸಾಧ್ಯ ಎಂದು ಭರವಸೆ ವ್ಯಕ್ತಪಡಿಸಿದರು.

ಪಕ್ಷದ ಪ್ರಮುಖ ಬಿ.ಕಿಶೋರಕುಮಾರ, ಕ್ಷೇತ್ರ ಸಮಿತಿ ಅಧ್ಯಕ್ಷ ರಾಜೇಶ್‌ ಕಾವೇರಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀಣಾ ಶೆಟ್ಟಿ, ಕುಂದಾಪುರ ಮಹಿಳಾ ಮೋರ್ಚಾ ಆಧ್ಯಕ್ಷೆ ಸಂಪಾವತಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗೌರಿ ದೇವಾಡಿಗ ಹಾಗೂ ಜಿಲ್ಲಾ ಸಮಿತಿಯ ಮಾಲಿನಿ ಸತೀಶ್‌ ಇದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com