ಪರಿವರ್ತನೆಗಳಿಗೆ ಪೂರಕವಾಗಿ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಚಿಂತನೆ ಮೂಡಿಸಿಕೊಳ್ಳಬೇಕು: ಡಾ| ಹೆಗ್ಗಡೆ

ಕುಂದಾಪುರ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂದು ಸ್ಫರ್ಧೆ ಅನಿವಾರ್ಯವಾಗಿದ್ದು ವಿದ್ಯಾರ್ಥಿಗಳು ಪ್ರತಿ ಕ್ಷಣವೂ ತಯಾರಾಗಿರಬೇಕು. ಅವರು ಜಿಜ್ಞಾಸುಗಳಾಗಿ ಕಾಲೇಜಿಗೆ ಬಂದು ಜ್ಞಾನಿಗಳಾಗಿ ಹೊರಹೋಗಬೇಕು. ಪರಿವರ್ತನೆಗಳಿಗೆ ಪೂರಕವಾಗಿ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಚಿಂತನೆ ಮೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಕುತೂಹಲ ಪ್ರವೃತ್ತಿ ಅಗತ್ಯವಾಗಿ ಬೆಳೆಯಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
     ಅವರು ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜಿನ ಸುವರ್ಣ ಮಹೋತ್ಸವ ಸಮಾರಂಭದ 'ಸುವರ್ಣ ಸಭೆ'ಯಲ್ಲಿ 'ಹೊನ್ನ ಭಂಡಾರ' ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
    ಮಣಿಪಾಲ ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ನ ಅಧ್ಯಕ್ಷ ಡಾ| ಎಚ್‌.ಎಸ್‌. ಬಲ್ಲಾಳ್‌ ಅಧ್ಯಕ್ಷತೆ ವಹಿಸಿದ್ದರು.
    ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ಡಾ| ಚಂದ್ರಶೇಖರ ಶೆಟ್ಟಿ, ಪಂಜಾಬ್‌ ನ್ಯಾಶನಲ್‌ ಬ್ಯಾಂಕಿನ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಕೆ.ಆರ್‌. ಕಾಮತ್‌ ಉಪಸ್ಥಿತರಿದ್ದರು.
     ಕಾಲೇಜಿನ ಆಡಳಿತ ಮಂಡಳಿಯ ವಿಶ್ವಸ್ತರಾದ ಬಿ.ಎಂ. ಸುಕುಮಾರ್‌ ಶೆಟ್ಟಿ, ಶಾಂತಾರಾಮ ಪ್ರಭು, ದೇವದಾಸ ಕಾಮತ್‌, ರಾಜೇಂದ್ರ ತೋಳಾರ್‌, ಎನ್‌. ಪದ್ಮಾಕರ ಕಾಮತ್‌, ಸದಾನಂದ ಚಾತ್ರ ಉಪಸ್ಥಿತರಿದ್ದರು.

ಸಮ್ಮಾನ
ಕಾಲೇಜಿನ ವಿಶ್ವಸ್ತ ಮಂಡಳಿಯ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಹಿರಿಯ ಉದ್ಯಮಿ ಸೊಲೋಮನ್‌ ಸೋನ್ಸ್‌, ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಎನ್‌.ಪಿ. ನಾರಾಯಣ ಶೆಟ್ಟಿ, ಪ.ಪೂ. ಕಾಲೇಜಿನ ಪ್ರಾಂಶುಪಾಲ ಜಿ.ಎಂ. ಗೊಂಡ, ಹಿರಿಯ ಉಪನ್ಯಾಸಕ ಪ್ರೊ| ಕೆ. ಶಾಂತಾರಾಮ್‌, ಶಿಕ್ಷಕ - ರಕ್ಷಕ ಸಂಘದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾರ್ಯದರ್ಶಿ ನರಸಿಂಹ ಅವರನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು. ಸಮ್ಮಾನಿತರ ಪರವಾಗಿ ವಿಶ್ವಸ್ತ ಮಂಡಳಿಯ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರು ಮಾತನಾಡಿದರು.
   ಆಡಳಿತ ಮಂಡಳಿಯ ಅಧ್ಯಕ್ಷ ಡಾ| ಎಚ್‌. ಶಾಂತಾರಾಮ್‌ ಹಾಗೂ ಅಕಾಡೆಮಿ ಆಪ್‌ ಜನರಲ್‌ ಎಜುಕೇಶನ್‌ ಅಧ್ಯಕ್ಷ ಡಾ| ಎಚ್‌.ಎಸ್‌. ಬಲ್ಲಾಳ್‌ ಅವರನ್ನು ಗೌರವಿಸಲಾಯಿತು. ಅರ್ಥಶಾಸ್ತ್ರದ ಕುರಿತಾದ ರಾಷ್ಟ್ರೀಯ ವಿಚಾರ ಸಂಕಿರಣ ಪ್ರಬಂಧ ಸಂಪುಟ ಅನಾವರಣಗೊಳಿಸಲಾಯಿತು.
     ಕಾಲೇಜಿನ ವಿಶ್ವಸ್ತ ಮಂಡಳಿಯ ಉಪಾಧ್ಯಕ್ಷ ಡಾ| ಎಚ್‌. ಶಾಂತಾರಾಮ್‌ ಸ್ವಾಗತಿಸಿ, ಪ್ರಸ್ತಾವನೆಗೈದರು. ಪ್ರೊ| ವಿ. ಅರವಿಂದ ಹೆಬ್ಟಾರ್‌ ಶುಭಾಶಯ ಪತ್ರ ವಾಚಿಸಿದರು. ವಿಶ್ರಾಂತ ಉಪನ್ಯಾಸಕ ಡಾ| ಎಚ್‌.ವಿ. ನರಸಿಂಹಮೂರ್ತಿ ಕಾರ್ಯಕ್ರಮ ನಿರ್ವಹಿಸಿದರು. ಪ್ರಾಂಶುಪಾಲ ಡಾ| ಎನ್‌.ಪಿ. ನಾರಾಯಣ ಶೆಟ್ಟಿ ವಂದಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com