ರಾಜ್ಯ ಯುವಜನೋತ್ಸವ

ಉಡುಪಿ: ರಾಜ್ಯಮಟ್ಟದ ಯುವಜನೋತ್ಸವವನ್ನು ಡಿ.14 ರಿಂದ 16 ರವರೆಗೆ ಮಂಡ್ಯ ತಾಲೂಕು ಕಿಲಾರ ಗ್ರಾಮದಲ್ಲಿ ಸಂಘಟಿಸಲು ನಿರ್ಧರಿಸಲಾಗಿದೆ.
     ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ವೈಯಕ್ತಿಕ ವಿಭಾಗ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
      ಭಾಗವಹಿಸುವ ಸ್ಪರ್ಧಿಗಳು ಡಿ.14 ರಂದು ಬೆಳಗ್ಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದೆ. ಸ್ಪರ್ಧಿಗಳಿಗೆ ಅಗತ್ಯವಾಗಿ ಬೇಕಾಗುವ ಲಘು ಹಾಸಿಗೆ, ಹೊದಿಕೆ, ಬೀಗಗಳನ್ನು ತಾವೇ ಕೊಂಡೊಯ್ಯಬೇಕು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com