ಸುವರ್ಣ ಗ್ರಾಮ ಯೋಜನೆ ಕಾಮಗಾರಿಗೆ ಚಾಲನೆ

ಸಿದ್ಧಾಪುರ: ಗ್ರಾಮೀಣ ಭಾಗದಲ್ಲಿ ಮೂಲ ಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಲಾಗುವುದು. ಮುಂದಿನ ದಿನಗಳಲ್ಲಿ ಮೂಲ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಗೆ ಹೆಚ್ಚು ಗಮನ ಕೊಡಲಾಗುವುದು. ಗ್ರಾಮೀಣ ಭಾಗದಲ್ಲಿ ರಸ್ತೆಗಳು ದುರವಸ್ಥೆಗೆ ತಲುಪಿದ್ದರಿಂದ ಸುವರ್ಣ ಗ್ರಾಮ ಯೋಜನೆಯಡಿ 36 ಲಕ್ಷ ರೂ.ಗೂ ಹೆಚ್ಚು ಅನುದಾನವನ್ನು ರಸ್ತೆಗೆ ಮೀಸಲಾಗಿರಿಸಿದೆ ಎಂದು ತಾಪಂ ಅಧ್ಯಕ್ಷೆ ದೀಪಿಕಾ ಎಸ್. ಶೆಟ್ಟಿ ಹೇಳಿದರು. 

ಅರಸಮ್ಮಕಾನುವಿನಲ್ಲಿ ಸುವರ್ಣ ಗ್ರಾಮ ಯೋಜನೆಯಡಿ 47 ಲಕ್ಷ ರೂ. ಅನುದಾನದ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಯೋಜನೆಯಲ್ಲಿ ಅರಸಮ್ಮಕಾನು ಅಂಗನವಾಡಿಗೆ 4 ಲಕ್ಷ, ಶೇಡಿಮನೆ ಸರಕಾರಿ ಹಿ.ಪ್ರಾ. ಶಾಲೆಯ ಆವರಣ ಗೋಡೆಗೆ 3.5 ಲಕ್ಷ ರೂ., ಮಾಂಡಿ ಮೂರುಕೈ ರಾಜೀವ್ ಗಾಂಧಿ ಸಭಾಭವನದ ಕಟ್ಟಡಕ್ಕೆ 3.5 ಲಕ್ಷ ರೂ. ಅನುದಾನ ಮಂಜೂರಾಗಿದೆ ಎಂದರು. ಗ್ರಾಪಂ ಅಧ್ಯಕ್ಷೆ ಸುಶೀಲಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com