ವಲಯ ಮಟ್ಟದ ಕಲಿಕೋತ್ಸವ

ಬೈಂದೂರು : ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಯವರ ಕಛೇರಿ ಬೈಂದೂರು ವ್ಯಾಪ್ತಿಯ ವಲಯ ಮಟ್ಟದ ಕಲಿಕೋತ್ಸವ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಗೇರಿ ಇಲ್ಲಿ ನಡೆಯಿತು.
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಶ್ರೀ. ಶಂಕರ ದೇವಾಡಿಗ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಡಯಟ್ ನ ಹಿರಿಯ ಉಪನ್ಯಾಸಕರಾದ ಶ್ರೀ. ಭಾಸ್ಕರ ಶೆಟ್ಟಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಭವಾನಿ ಪೂಜಾರಿ ಕೆರ್ಗಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ. ಸುಂದರ ಕೊಠಾರಿ, ಸ್ಥಳೀಯರಾದ ಮಂಜುನಾಥ ದಡಾಲೆ, ಪ್ರಭಾಕರ ಶೆಟ್ಟಿ, ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ( ರಿ ) ಮೊಗೇರಿ ಒಕ್ಕೂಟದ ಅಧ್ಯಕ್ಷರಾದ ವಿದ್ಯಾಲಕ್ಷ್ಮೀ, ಉಡುಪಿ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ. ಶಶಿಧರ ಶೆಟ್ಟಿ, ಬೈಂದೂರು ವಲಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಹದೇವ ಮಂಜ, ಸಂಘದ ಕಾರ್ಯದರ್ಶಿ ಎಸ್. ಬಾಲಯ್ಯ ಶೇರುಗಾರ್, ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ. ಶ್ರೀನಿವಾಸ ಉಬ್ಜೇರಿ, ಶ್ರೀ. ಹಿರಿಯಣ್ಣ ರಾವ್, ಶಿಕ್ಷಣ ಸಂಯೋಜಕರಾದ ಶ್ರೀ. ಮಂಜುನಾಥ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀ. ಮಂಜುನಾಥ ದೇವಾಡಿಗ, ಕ.ರಾ. ನೌ. ಸಂಘದ ಪ್ರತಿನಿಧಿ ಶ್ರೀ. ಶೇಖರ ಉಪಸ್ಥಿತರಿದ್ದರು.

 ಕ್ಷೇತ್ರ ಸಮನ್ವಯಾಧಿಕಾರಿಯವರಾದ ಶ್ರೀ. ಚಂದ್ರಶೇಖರ ಶೆಟ್ಟಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಯವರಾದ ಶ್ರೀ. ಚಂದ್ರಶೇಖರ ಹೆಚ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ. ಕೃಷ್ಣದೇವ ಶಾಸ್ತ್ರೀ ವಂದಿಸಿದರು. ಶ್ರೀ. ಗಣಪತಿ ಹೋಬಳಿದಾರ್ ಮತ್ತು ಶ್ರೀ. ಸಿ.ಎನ್. ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com