ಗುಡ್ಡಮ್ಮಾಡಿಯ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ

ಕುಂದಾಪುರ: ಕುಂದಾಪುರ ತಾಲೂಕಿನ ಇತಿಹಾಸ ಪ್ರಸಿಧ್ದ ಗುಡ್ಡಮ್ಮಾಡಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವವು ಜನವರಿ 6 ರಂದು ವಿಜೃಂಭಣೆಯಿಂದ ನಡೆಯಿತು. ಸೇನಾಪುರದಲ್ಲಿರುವ ಈ ಇತಿಹಾಸ ಪ್ರಸಿಧ್ಧ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ ಮಹೋತ್ಸವಕ್ಕೆ ನಾಡಿನ ಮೂಲೆಮೂಲೆಗಳಿಂದ ಭಕ್ತಾದಿಗಳು ಆಗಮಿಸಿ ದೇವರ ಪ್ರಸಾದವನ್ನು ಸ್ವೀಕರಿಸಿ ಕೃತಾರ್ಥರಾದರು. 
 ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಪ್ರಾರ್ಥನೆ, ಪ್ರದಾನ ಹೋಮ ಹಾಗೂ ನವಕಲಶಾಭೀಶೇಕ ಉತ್ಸವವು ಆರಂಭಗೊಂಡು ಭಕ್ತಾಧಿಗಳು ಬೆಳಿಗ್ಗೆಯಿಂದ ದೇವಸ್ಥಾನದ ಪೂಜಾವಿಧಿಗಳಲ್ಲಿ ಪಾಲ್ಗೊಂಡಿರುವುದು ಕಂಡುಬರುತ್ತಿತ್ತು. ರಾತ್ರಿಯ ವೇಳೆಯಲ್ಲು ಜನರು ಕಿಕ್ಕಿರಿದು ನೆರೆದಿದ್ದು ವಾಹನ ಸಂಚಾರವನ್ನು ಸುಗಮಗೊಳಿಸಲು ಹಾಗೂ ಶಿಸ್ತು ಕಾಪಾಡಲು ಪೊಲೀಸ್ ಸಿಬ್ಬಂದಿಯು ಶಕ್ತಿಮೀರಿ ಪ್ರಯತ್ನಿಸುತ್ತಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com