ಆರೋಗ್ಯವಂತ ತಾಯಿಯಿಂದ ಆರೋಗ್ಯವಂತ ಮಗು

ಕಮಲಶಿಲೆ : ಆರೋಗ್ಯವಂತ ಮಗು ಬೇಕು ಎನ್ನುವುದು ಎಲ್ಲರ ಅಭಿಲಾಷೆ. ಆದರೆ ಆರೋಗ್ಯವಂತ ಮಗು ಬೇಕಾದರೆ ಆರೋಗ್ಯವಂತ ತಾಯಿ ಬೇಕು. ಆರೋಗ್ಯವಂತ ತಾಯಿ ಮುಖ್ಯ ಸಂಗತಿಯಾದಾಗ ಮಾತ್ರ ಆರೋಗ್ಯವಂತ ಮಗು ಕಂಡುಕೊಳ್ಳಬಹುದು ಎಂದು ಹಳ್ಳಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಹೇಳಿದರು. 

 ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಳದ ಸಭಾಂಗಣದಲ್ಲಿ ಕೋಟೇಶ್ವರ ರೋಟರಿ ಕ್ಲಬ್ ಹಾಗೂ ಆ್ಯನ್ಸ್ ಕ್ಲಬ್ ಆಶ್ರಯದಲ್ಲಿ ಹಮ್ಮಿಕೊಂಡ ಗರ್ಭಿಣಿಯರಿಗೆ ಮಡಿಲು ಕಿಟ್ ವಿತರಣೆ ಹಾಗೂ ತಾಯಿ ಮತ್ತು ಮಗುವಿನ ಆರೋಗ್ಯ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಮುಖ್ಯ ಅತಿಥಿ ಉಡುಪಿ ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗಣಪತಿ ಟಿ. ಶ್ರೀಯಾನ್ ಅರ್ಹ ಫಲಾನುಭವಿಗಳಿಗೆ ಮಡಿಲು ಕಿಟ್ ವಿತರಿಸಿದರು. ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಳದ ಆಡಳಿತ ಮೊಕ್ತೇಸರ ಸಚ್ಚಿದಾನಂದ ಚಾತ್ರ ಕಾರ್ಯಕ್ರಮ ಉದ್ಘಾಟಿಸಿದರು. ಮಡಿಲು ಕಿಟ್ ಪ್ರಾಯೋಜಕರಾದ ಉದ್ಯಮಿಗಳಾದ ದಿನೇಶ್ ಕಾಮತ್ ಹಾಗೂ ಮಹಮದ್ ಮುಸ್ತಾಕ್ ಕುಂಭಾಸಿ ಅವರನ್ನು ಗೌರವಿಸಲಾಯಿತು. ಆರೋಗ್ಯ ಇಲಾಖೆಯ ಜಿಲ್ಲಾ ಕಾರ್ಯಕ್ರಮ ಯೋಜನಾಧಿಕಾರಿ ಡಾ. ನಾಗಭೂಷಣ್ ಉಡುಪ ಶುಭ ಹಾರೆಸಿದರು. ಕೋಟೇಶ್ವರ ರೋಟರಿ ಕ್ಲಬ್ ಅಧ್ಯಕ್ಷ ಪ್ರಭಾಕರ ಬಿ. ಕುಂಭಾಸಿ ಅಧ್ಯಕ್ಷತೆ ವಹಿಸಿದ್ದರು. ಆ್ಯನ್ಸ್ ಕ್ಲಬ್ ಅಧ್ಯಕ್ಷೆ ದೀಪಿಕಾ ಶೆಟ್ಟಿ ಉಪಸ್ಥಿತರಿದ್ದರು. ಸಾವಿತ್ರಿ ಹೆಬ್ಬಾರ್ ಪ್ರಾರ್ಥಿಸಿದರು. ನಾಗೇಶ್ ಶೆಟ್ಟಿಗಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರವೀಂದ್ರ ನಾವಡ ಕಾರ್ಯಕ್ರಮ ನಿರ್ವಹಿಸಿದರು. ರೋಟರಿ ಕ್ಲಬ್ ಕಾರ್ಯದರ್ಶಿ ರವೀಂದ್ರ ಶೆಟ್ಟಿ ವಂದಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com