ಫೆ.18: ಮಯ್ಯಾಡಿಯ ಮಹಾಸತಿ ದೇಗುಲ ಪ್ರತಿಷ್ಠಾಪನೆ

 ಬೈಂದೂರು: ಮಯ್ಯಾಡಿಯ ಪುರಾತನ ಪ್ರಸಿದ್ಧ ಶಕ್ತಿದೇವತೆ ಮಹಾಸತಿ ಅಮ್ಮನವರ ದೇವಸ್ಥಾನವು ಸುಮಾರು 75 ಲಕ್ಷರೂಪಾಯಿ ವೆಚ್ಚದಲ್ಲಿ ನೂತನ ಶಿಲಾಮಯ ಗರ್ಭಗುಡಿ ಹಾಗೂ ಪ್ರಾಂಗಣದ ನವೀಕರಣ ಕಾರ್ಯ ಭರದಿಂದ ಸಾಗುತ್ತಿದ್ದು ಪುನರ್ ಪ್ರತಿಷ್ಟಾಪನೆಗೆ ಸಜ್ಜಾಗುತ್ತಿದೆ. ಶಾಶ್ವತ ಶಿಲಾಮಯ ಮತ್ತು ನಾಗ ಸಾನಿಧ್ಯದ ನಿರ್ಮಾಣ ಕಾರ್ಯ ಮುಕ್ತಾಯದ ಹಂತದಲ್ಲಿದೆ.
    ಫೆ.18 ರಿಂದ 20ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು ಸ್ವರ್ಣವಲ್ಲಿ ಸೋಂದಾ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಪ್ರತಿಷ್ಠಾಪನಾ ಕಾರ್ಯ ನಡೆಯಲಿದೆ. ಈ ಸಂಧರ್ಭದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮಗಳು ಜರುಗಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com