ಜ.27: ಅತಿಥಿ ಉಪನ್ಯಾಸಕರಿಂದ ಮಂತ್ರಿ ನಿವಾಸದ ಎದುರು ಧರಣಿ

ಕುಂದಾಪುರ: ರಾಜ್ಯಾದ್ಯಂತ ಸರಕಾರಿ ಪದವಿ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜ.27 ರಿಂದ ತರಗತಿ ಬಹಿಷ್ಕರಿಸಿ, ಬೆಂಗಳೂರಿನ ಮುಖ್ಯಮಂತ್ರಿ ನಿವಾಸದ ಎದುರು ಧರಣೆ ಸತ್ಯಾಗ್ರಹ ನಡೆಯಲಿದೆ.
     ರಾಜ್ಯದ 362 ಸರಕಾರಿ ಪದವಿ ಕಾಲೇಜಿನಲ್ಲಿ 10,652 ಕ್ಕೂ ಹೆಚ್ಚು ಉಪನ್ಯಾಸಕರು ಕಳೆದ 15 ವರ್ಷಗಳಿಂದ ಅತಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದಾರೆ. ಸೇವಾಭದ್ರತೆ, ವರ್ಷದ 12 ತಿಂಗಳು ವೇತನ, ಯುಜಿಸಿಗೆ ಸಮಾನವಾದ ವೇತನ ವಿವಿಧ ಬೇಡಿಕೆ ಈಡೇರಿಕೆಗೆ ರಾಜ್ಯದಲ್ಲಿ ಹೊಸ ಸರಕಾರ ರಚನೆಯಾದ ಮೇಲೆ ಬೆಳಗಾವಿಯಲ್ಲಿ ನಡೆದ ಹಕ್ಕೋತ್ತಾಯ ಮನವಿ, ಪ್ರತಿಭಟನೆ, ರಾಜ್ಯ ಮಟ್ಟದ ಅತಿಥಿ ಉಪನ್ಯಾಸಕರ ಸಮಾವೇಶದ ಮೂಲಕ ಸರಕಾರದ ಗಮನ ಸೆಳೆಯಲು ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ನೀಡಿದ ನ್ಯಾಯಯುತ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದೇ ಇರುವುದರಿಂದ ತಮ್ಮ ಬೇಡಿಕೆ ಈಡೇರುವ ತನಕ ರಾಜ್ಯಾದ್ಯಂತ ಅನಿಧಿìಷ್ಟಾವಧಿ ತರಗತಿ ಬಹಿಷ್ಕಾರ, ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಮಂಗಳೂರು ವಿ.ವಿ ಸರ್ವ ಕಾಲೇಜು ಅತಿಥಿ ಉಪನ್ಯಾಸಕರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com