ಜ.22: ವಕ್ವಾಡಿ ದೇವಸ್ಥಾನದ ಪುನಃ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ

ಕುಂದಾಪುರ: ವಾದಿರಾಜರ ಜನ್ಮ ಕ್ಷೇತ್ರ ಹೂವಿನಕೆರೆ ವಾದಿರಾಜ ಮಠದ ಸಮೀಪ ವಕ್ವಾಡಿಯಲ್ಲಿ ದೇವರಾಡಿ ನೂತನ ಶಿಲಾಮಯ ಶ್ರೀ ಬ್ರಹ್ಮಲಿಂಗ,ಯಕ್ಷಿ ಹಾಗೂ ಚಿಕ್ಕು ಸಪರಿವಾರ ದೇವಸ್ಥಾನದ ಪುನಃ ಪ್ರತಿಷ್ಠಾಪನೆ,ಬ್ರಹ್ಮಕಲಶೋತ್ಸವ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಜ.22 ರಿಂದ ಜ.24 ರ ವರೆಗೆ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜನ್ಸಾಲಿ ಶಿವರಾಮ ಶೆಟ್ಟಿ ಬುಧವಾರ ಕುಂದಾಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜ.24 ರಂದು ಮಧ್ಯಾಹ್ನ 3ಕ್ಕೆ  ಉಡುಪಿ ಅದಮಾರು ಮಠದ ಶ್ರೀಗಳಾದ ವಿಶ್ವಪ್ರಿಯ ತೀರ್ಥರು ಹಾಗೂ ಬೆಂಗಳೂರು ಆಯುರಾಶ್ರಮದ ವಿದ್ಯಾವಾಚಸ್ಪತಿ ಡಾ. ವಿಶ್ವ ಸಂತೋಷ ಭಾರತಿ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ ಧಾರ್ಮಿಕ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಳದ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ, ಉದ್ಯಮಿಗಳಾದ ವಿ.ಕೆ.ಮೋಹನ್, ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ವೇದಮೂರ್ತಿ ವಾದಿರಾಜ್ ಭಟ್, ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನಾಧಿಕಾರಿ ಹೇಮಲತಾ ಹೆಗ್ಡೆ ಮುಂತಾದವರು ಭಾಗವಹಿಸಲಿದ್ದಾರೆ. ಅದೇ ದಿನ ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ ನಡೆಯಲಿದೆ. ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ ಉಳ್ಳೂರು ರಾಘವೇಂದ್ರ ಆಚಾರ್ ಅವರಿಂದ ಏಕಪಾತ್ರಾಭಿನಯ, ಹಾಸ್ಯ ಚಕ್ರವರ್ತಿ ಜಯರಾಮ್ ಶೆಟ್ಟ ಬಳಗದವರಿಂದ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಹೆಬ್ಬಾಗಿಲು ಮನೆ ಆನಂದ ಶೆಟ್ಟಿ, ಕಾರ್ಯದರ್ಶಿ ನೈಲಾಡಿ ಭುಜಂಗ ಶೆಟ್ಟಿ ಉಪಸ್ಥಿತರಿದ್ದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com