ಪ್ರಗತಿಬಂಧು ಸ್ವ-ಸಹಾಯ ಒಕ್ಕೂಟಗಳ ಪದಗ್ರಹಣ

ವಂಡ್ಸೆ: ಪಡೆದ ಸಾಲವನ್ನು ಸದುದ್ದೇಶಕ್ಕೆ ವಿನಿಯೋಗಿಸಿದಾಗ ಅಭಿವೃದ್ಧಿಯೊಂದಿಗೆ ಯೋಜನೆಯ ಆಶಯವೂ ಈಡೇರುತ್ತದೆ. ಸ್ವಾವಲಂಬನೆಯೊಂದಿಗೆ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಿಡಿಸಿಕೊಂಡು ಪ್ರಗತಿಗೆ ಕಾರಣರಾಬೇಕು ಎಂದು ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಪ್ರಾದೇಶಿಕ ಕಛೇರಿಯ  ಯೋಜನಾಧಿಕಾರಿ ಕೆ.ಚಂದ್ರಶೇಖರ್ ಹೇಳಿದರು.
ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಜ.12ರಂದು ನಡೆದ ಶ್ರೀ.ಕ್ಷೇ.ಧ.ಗ್ರಾ.ಯೋಜನೆ ವಂಡ್ಸೆ ಕಾರ್ಯಕ್ಷೇತ್ರದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ವಿ.ಕೆ.ಶಿವರಾಮ ಶೆಟ್ಟಿ, ನಿವೃತ್ತ ಕ್ರೀಡಾಧಿಕಾರಿ ಕರುಣಾಕರ ಶೆಟ್ಟಿ ಬಗ್ವಾಡಿ, ನಿವೃತ್ತ ಮುಖ್ಯೋಪಾಧ್ಯಾಯ ರಾಜೀವ ಶೆಟ್ಟಿ, ಜನಜಾಗೃತಿ ವೇದಿಕೆ ಸದಸ್ಯ ತ್ಯಾಂಪಣ್ಣ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಶಶಿಧರ ಶೆಟ್ಟಿ, ಗುತ್ತಿಗೆದಾರರಾದ  ಕರುಣಾಕರ ಶೆಟ್ಟಿ ಹರ್ಜಿ, ಗ್ರಾಮ ಪಂಚಾಯತ್ ಸದಸ್ಯ ಸಂಜೀವ ಪೂಜಾರಿ ವಂಡ್ಸೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ವಂಡ್ಸೆ ಒಕ್ಕೂಟದ ಅಧ್ಯಕ್ಷ ಶಂಕರ ಆಚಾರ್ಯ, ನೂಜಾಡಿ ಒಕ್ಕೂಟದ ಅಧ್ಯಕ್ಷ ಮಂಜುನಾಥ ನಾಯ್ಕ್, ಆತ್ರಾಡಿ ಒಕ್ಕೂಟದ ಅಧ್ಯಕ್ಷ ಸುರೇಶ ಮೊಗವೀರರವರು ನೂತನ ಅಧ್ಯಕ್ಷರಾದ ಜಯಂತಿ ಪಿ.ಶೆಟ್ಟಿ, ರಾಮ ಗಾಣಿಗ, ಸುಪ್ರಿತಾ ಎನ್.ಶೆಟ್ಟಿ ಇವರಿಗೆ ಅಧಿಕಾರ ಹಸ್ತಾಂತರಿಸಿದರು. ಸೇವಾ ಪ್ರತಿನಿಧಿ ಯಶೋಧಾ  ವರದಿ ವಾಚಿಸಿದರು. ವಂಡ್ಸೆ ವಲಯ ಮೇಲ್ವಿಚಾರಕ ದಿನೇಶ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಒಕ್ಕೂಟದ ಮಾಜಿ ಅಧ್ಯಕ್ಷ ವಾಸು ಜಿ.ನಾಯ್ಕ್ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಲಾಲಿ ಸೋಜನ್ ವಂದಿಸಿದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com