ತರಕಾರಿ-ಪುಷ್ಪಬೆಳೆ: ತರಬೇತಿ ಶಿಬಿರ

ಉಡುಪಿ: ವಿವಿಧ ತರಕಾರಿ ಮತ್ತು ಪುಷ್ಪಬೆಳೆಗಳಲ್ಲಿ ಅಧಿಕ ಇಳುವರಿಗೆ ಅನುಸರಿಸಬೇಕಾದ ಆಧುನಿಕ ಸಂರಕ್ಷಿತ ಬೇಸಾಯ ಕ್ರಮಗಳು, ಸಾವಯವ ಕೃಷಿ ತಂತ್ರಜಾnನ, ಸೂಕ್ತ ನೀರಾವರಿ ಪದ್ಧತಿಗಳು, ಕೊಯ್ಲೋತ್ತರ ಹಾಗೂ ಸಂಸ್ಕರಣಾ ಕ್ರಮಗಳು, ಮಾರುಕಟ್ಟೆ ವಿಧಾನಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ರಾಜ್ಯ ಮಟ್ಟದ ತರಬೇತಿ ಶಿಬಿರವನ್ನು ಜನವರಿ ತಿಂಗಳಿನಲ್ಲಿ ಬಾಗಲಕೋಟೆಯ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ ಏರ್ಪಡಿಸಿದೆ.

ಉಚಿತ ಊಟ ಮತ್ತು ವಸತಿ ವ್ಯವಸ್ಥೆ ನೀಡಲಾಗುವುದು. ಆಸಕ್ತ ರೈತರು, ಮಹಿಳೆಯರು, ಸ್ವ-ಸಹಾಯ ಸಂಘದ ಸದಸ್ಯರು, ಯುವಕರು ವಿವರಗಳನ್ನು ಜ.18 ರೊಳಗಾಗಿ ನೊಂದಾಯಿಸಬೇಕು.

ಹೆಚ್ಚಿನ ವಿವರಗಳಿಗಾಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿ.ವಿ.ವಿ. ಸಂಘದ ಸ್ಪಿನ್ನಿಂಗ್‌ ಮಿಲ್‌ ಆವರಣ, ಗದ್ದನಕೇರಿ ರೋಡ್‌, ಬಾಗಲಕೋಟ-587103, ದೂರವಾಣಿ ಸಂಖ್ಯೆ 08354-244028, 8050502960 ಇವರನ್ನು ಸಂಪರ್ಕಿಸಬಹುದು ಎಂದು ಕೇಂದ್ರದ ಪ್ರಕಟನೆ ತಿಳಿಸಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com