ರಾಜ್ಯ ಮಟ್ಟದ ನಾಟಕ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಉಡುಪಿ: ಇಲ್ಲಿನ ರಂಗಭೂಮಿ ಸಂಸ್ಥೆ ನಡೆಸಿದ 34ನೇ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆಯಲ್ಲಿ ಪ್ರಶಸ್ತಿ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ಹಾಗೂ ಪ್ರಸಿದ್ಧ ಲೇಖಕ ಜಿ.ಕೆ. ಐತಾಳ್ ಅವರಿಗೆ 'ಸಾಹಿತ್ಯ ರಂಗ ವಿಭೂಷಣ'ಪ್ರಶಸ್ತಿ ಪ್ರದಾನ ಸಮಾರಂಭ ಭಾನುವಾರ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಿತು. 

ಪ್ರಶಸ್ತಿ ಪ್ರದಾನ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, 49ವರ್ಷಗಳಷ್ಟು ಸುದೀರ್ಘ ಕಾಲ ರಂಗಸೇವೆ ನಡೆಸಿದ ಉಡುಪಿ ರಂಗಭೂಮಿ ಸಂಸ್ಥೆಗೆ ಸ್ವಂತ ಕಟ್ಟಡದ ಕನಸನ್ನು ನನಸು ಮಾಡಲು ಪೂರ್ಣ ಸಹಕಾರ ನೀಡಲಾಗುವುದು. ಈ ಬಗ್ಗೆ ಸಂಸ್ಥೆಯ ಮನವಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವೆ ಉಮಾಶ್ರೀ ಅವರಿಗೆ ಶಿಫಾರಸ್ಸು ಮಾಡಿದ್ದೇನೆ. ಅದು ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿ, ಶೀಘ್ರದಲ್ಲಿ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನೆ ಮಾಡಲು ನೆರವಾಗುತ್ತೇನೆ ಎಂದರು. 

ಪ್ರಾಸ್ತಾವಿಕವಾಗಿ ಮಾತನಾಡಿದ ರಂಗಭೂಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಸಂಸ್ಥೆಗೆ ಸ್ವಂತ ಕಟ್ಟಡವನ್ನು ಹೊಂದುವ ನಿಟ್ಟಿನಲ್ಲಿ ಸರಕಾರದವತಿಯಿಂದ 10ಲಕ್ಷ ರೂ.ಅನುದಾನ ನಿರೀಕ್ಷಿಸಲಾಗಿದ್ದು, ಪ್ರಥಮ ಕಂತಾಗಿ 5ಲಕ್ಷ ರೂ. ನೀಡುವ ಭರವಸೆ ಸಚಿವ ಸೊರಕೆ ನೀಡಿದ್ದಾರೆ ಎಂದರು. 

ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಬೈಂದೂರಿನ ಲಾವಣ್ಯ ತಂಡ (ಮರಣ ಮೃದಂಗ)ಸೇರಿದಂತೆ ತಂಡ ಹಾಗೂ ವೈಯುಕ್ತಿಕ ಪ್ರಶಸ್ತಿಗಳ ಪ್ರದಾನ ನಡೆಯಿತು. ಸಂಸ್ಥೆಯ 'ಕಲಾಂಜಲಿ' ಸ್ಮರಣ ಸಂಚಿಕೆ ಬಿಡುಗಡೆ ನಡೆಯಿತು. 

ಎಂಜಿಎಂ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ಹಾಲ ನಾಕ್, ಲೇಖಕ ಜಿ.ಕೆ.ಐತಾಳ್ , ಕರ್ನಾಟಕ ಬ್ಯಾಂಕಿನ ಅಧ್ಯಕ್ಷ ಅನಂತಕೃಷ್ಣ , ರಂಗಭೂಮಿಯ ಸಂಸ್ಥೆಯ ಉಪಾಧ್ಯಕ್ಷರಾದ ಯು.ದಾಮೋದರ, ಯು.ಉಪೇಂದ್ರ ಉಪಸ್ಥಿತರಿದ್ದರು. ಸಂಸ್ಥೆಯ ಪ್ರ.ಕಾ. ಪಿ.ವಾಸುದೇವ ರಾವ್ ಕಾರ್ಯಕ್ರಮ ನಿರೂಪಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com