ಉಪ್ಪುಂದದ ವಿಜಯಶ್ರೀಗೆ ಕನ್ನಡ ಮಾಧ್ಯಮ ಪ್ರಶಸ್ತಿ

ಕುಂದಾಪುರ: ಪಿಯುಸಿಯಲ್ಲಿ 2012-13ನೇ ಶೈಕ್ಷಣಿಕ ಸಾಲಿನಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ಕುಂದಾಪುರ ತಾಲೂಕಿಗೆ ತೃತೀಯ ಸ್ಥಾನ ಪಡೆದ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿನಿ ಉಪ್ಪುಂದದ ವಿಜಯಶ್ರೀಗೆ ಕನ್ನಡ ಪ್ರಾಧಿಕಾರವು ಕನ್ನಡ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕನ್ನಡ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ, ಕ್ರೀಡಾಪಟು ವಿಜಯ್ ಭಾರದ್ವಾಜ್ ಉಪಸ್ಥಿತರಿದ್ದರು. ಪ್ರಶಸ್ತಿ ಪುರಸ್ಕೃತ ವಿಜಯಶ್ರೀ ಉಪ್ಪುಂದದ ರಾಮ ಮತ್ತು ಶಕುಂತಲಾ ದಂಪತಿ ಪುತ್ರಿ. ಈಕೆ ಪ್ರಸ್ತುತ ಬೈಂದೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಾಳೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com