ಯುವಜನ ಮೇಳ: ಪೂರ್ವಭಾವಿ ಸಭೆ

ಉಡುಪಿ: ಎಲ್ಲೂರಿನಲ್ಲಿ ನಡೆಯುವ ರಾಜ್ಯಮಟ್ಟದ 2012-13ನೇ ಸಾಲಿನ ಯುವಜನ ಮೇಳದ ಪೂರ್ವಭಾವಿ ಸಭೆ ಸಚಿವ ವಿನಯ ಕುಮಾರ್‌ ಸೊರಕೆ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆಯಿತು.

ಯುವಜನ ಮೇಳಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವ ಯುವ ಜನತೆಗೆ ಸೂಕ್ತ ಊಟ ಮತ್ತು ವಸತಿ ವ್ಯವಸ್ಥೆಯನ್ನು ಒದಗಿಸಬೇಕು. ಊಟ ಮತ್ತು ವಸತಿ ವ್ಯವಸ್ಥೆ ಉತ್ತಮವಾಗಿದ್ದರೆ ಅರ್ಧ ಸಮ್ಮೇಳನ ಯಶಸ್ವಿಯಾದಂತೆ. ಸ್ಪರ್ಧೆಗಳಲ್ಲಿ ಸರಿಯಾದ ತೀರ್ಪು ನೀಡುವಲ್ಲಿ ಗೊಂದಲ ಉಂಟಾಗದಂತೆ ಉತ್ತಮ ತೀರ್ಪುಗಾರರನ್ನು ನಿಯೋಜಿಸಬೇಕು ಎಂದು ಸ್ವಾಗತ ಸಮಿತಿ ಗೌರವಾಧ್ಯಕ್ಷ ಡಾ| ಮೋಹನ್‌ ಆಳ್ವ ತಿಳಿಸಿದರು. ವಿದ್ಯುತ್‌ ಸಂಪರ್ಕ, ನೀರಿನ ವ್ಯವಸ್ಥೆ ಮತ್ತು ವೇದಿಕೆ ಸಿದ್ಧತೆಗಳನ್ನು ಪರಿಶೀಲಿಸಲು ಖುದ್ದು ಎಲ್ಲೂರಿಗೆ ತೆರಳುವುದಾಗಿ ಆಳ್ವ ತಿಳಿಸಿದರು.

ಜಿಲ್ಲಾಧಿಕಾರಿ ಡಾ| ಎಂ.ಟಿ. ರೆಜು, ಜಿ.ಪಂ. ಸಿಇಒ ಎಸ್‌.ಎ. ಪ್ರಭಾಕರ ಶರ್ಮಾ, ನಗರಸಭೆ ಅಧ್ಯಕ್ಷ ಪಿ. ಯುವರಾಜ್‌ ಹಾಗೂ ವಿವಿಧ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಯುವಕ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com