ಫೆ. 18: ಗ್ರಾಮೀಣ ಅಂಚೆ ನೌಕರರ ಮುಷ್ಕರ

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆ, 7ನೇ ವೇತನ ಆಯೋಗ ರಚಿಸುವಂತೆ ಒತ್ತಾಯಿಸಿ ಜಿಲ್ಲೆಯ ಗ್ರಾಮೀಣ ಅಂಚೆ ನೌಕಕರು ಫೆ. 18ರಂದು ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಈ ಪ್ರಯುಕ್ತ ಫೆ. 18ರಂದು ಬೆಳಗ್ಗೆ 9.30ಕ್ಕೆ ಉಡುಪಿ ಪ್ರಧಾನ ಅಂಚೆ ಕಚೇರಿಯ ಎದುರು ಧರಣಿ ನಡೆಸಿ ಅಂಚೆ ಅಧೀಕ್ಷಕರಿಗೆ ಮನವಿ ಸಲ್ಲಿಸಿ ಅಲ್ಲಿಂದ ಮೆರವಣಿಗೆಯಲ್ಲಿ ಸರ್ವಿಸ್‌ ಬಸ್‌ ನಿಲ್ದಾಣ-ಬನ್ನಂಜೆ ಮಾರ್ಗವಾಗಿ ತಾಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸುವುದಾಗಿ ಗ್ರಾಮೀಣ ಅಂಚೆ ನೌಕರರ ಪ್ರಕಟನೆ ತಿಳಿಸಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com