ವಿದ್ಯಾರ್ಥಿಗಳಿಂದ ಕಥೆ ಕವನಗಳ ಆಹ್ವಾನ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಹಳೆವಿದ್ಯಾರ್ಥಿ ಸಂಘವು ವಿ.ವಿ. ಮಟ್ಟದ 10ನೇ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನವನ್ನು ಮಾರ್ಚ್ ತಿಂಗಳ ಮೂರನೇ ವಾರ ಮಂಗಳೂರಿನಲ್ಲಿ ಆಯೋಜಿಸಲಿದ್ದು ವಿದ್ಯಾರ್ಥಿಗಳಿಂದ ಕಥೆ, ಕವನ ಮತ್ತು ಪ್ರಬಂಧಗಳನ್ನು ಆಹ್ವಾನಿಸಲಾಗಿದೆ.

ಕಥೆ ಮತ್ತು ಕವನಗಳ ವಿಷಯದ ಆಯ್ಕೆ ವಿದ್ಯಾರ್ಥಿ­ಗಳಿಗೆ ಬಿಟ್ಟದ್ದು. ಮೂರು ಉತ್ತಮ ಕಥೆಗಳನ್ನು ಹಾಗೂ ಮೊದಲ ಹತ್ತು ಸ್ಥಾನ ಪಡೆದುಕೊಳ್ಳುವ ಕವಿತೆ­ಗಳನ್ನು ಸಮ್ಮೇಳನದ ಗೋಷ್ಠಿಗಳಿಗೆ ಆಯ್ಕೆ ಮಾಡ­ಲಾಗುತ್ತದೆ. ಕಥೆ ನಾಲ್ಕು ಪುಟಗಳ ಮಿತಿಯ­ಲ್ಲಿರಬೇಕು.
ಸಮ್ಮೇಳನದಲ್ಲಿ ಗುಂಪುಚರ್ಚೆ, ಕಥಾಗೋಷ್ಠಿ ಹಾಗೂ ಕವಿಗೋಷ್ಠಿಗಳು ನಡೆಯಲಿದ್ದು, ಅವುಗಳಲ್ಲಿ ತಮ್ಮ ವಿಚಾರ ಹಾಗೂ ಬರಹಗಳನ್ನು ಮಂಡಿಸಲಿರುವ ವಿದ್ಯಾರ್ಥಿಗಳನ್ನು ಸ್ಪರ್ಧೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಗುಂಪುಚರ್ಚೆಗೆ ನಿಗದಿಪಡಿಸಿರುವ ವಿಷಯ:

‘ಅಭಿವೃದ್ಧಿಯೆಡೆಗಿನ ನಾಗಾಲೋಟ: ಭ್ರಮೆ ಮತ್ತು ವಾಸ್ತವ’.  ಈ ಕುರಿತ ಪ್ರಬಂಧವನ್ನು ವಿದ್ಯಾರ್ಥಿಗಳು 2000 ಪದಗಳ ಮಿತಿಯಲ್ಲಿ ಸಿದ್ಧಪಡಿಸಿ ಕಳುಹಿಸಬೇಕು. ಮೊದಲ ನಾಲ್ಕು ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಗುಂಪು ಚರ್ಚೆಗೆ ಆಯ್ಕೆ ಮಾಡಲಾಗುತ್ತದೆ.
ಮಂಗಳೂರು ವಿ.ವಿ. ವ್ಯಾಪ್ತಿಗೆ ಬರುವ (ದಕ್ಷಿಣ ಕನ್ನಡ, ಉಡುಪಿ, ಕೊಡಗು) ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು.

ಕಾಸರಗೋಡಿನ ವಿದ್ಯಾರ್ಥಿಗಳಿಗೂ ಮುಕ್ತ ಅವಕಾಶವಿದೆ.  ವಿಜೇತರಿಗೆ ನಗದು ಬಹುಮಾನ ಹಾಗೂ ಭಾಗವಹಿಸಿದ ವಿದ್ಯಾರ್ಥಿ ಸಾಹಿತಿಗಳಿಗೆ ಪ್ರಶಸ್ತಿ ಪತ್ರ ನೀಡಲಾಗುವುದು. ಸ್ಪರ್ಧೆಗೆ ಪ್ರವೇಶಗಳನ್ನು ಕಳುಹಿಸುವಾಗ ಕಾಲೇಜಿನ ದೃಢೀಕರಣ ಪತ್ರ ಅಗತ್ಯ. ಪ್ರವೇಶ ಕಳುಹಿಸಲು ಕೊನೆಯ ದಿನಾಂಕ ಮಾರ್ಚ್‌ 5. ಹೆಚ್ಚಿನ ಮಾಹಿತಿಗೆ: ಕಾರ್ಯದರ್ಶಿ, ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ ಸಮಿತಿ, ಅಕ್ಷರೋದ್ಯಮ, 4ನೇ ಮಹಡಿ, ಸಿಟಿ ಪಾಯಿಂಟ್, ಕೊಡಿಯಾಲಬೈಲ್, ಮಂಗಳೂರು-–575003. ದೂರವಾಣಿ : 9880621824, 9449525854.


ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com