ಫೆ. 25: ಬಾಂಗ್ಲಾ ನುಸುಳುಕೋರರ ವಿರುದ್ಧ ಪ್ರತಿಭಟನೆ

ಉಡುಪಿ: ಬಾಂಗ್ಲಾ ನುಸುಳುಕೋರರಿಂದ ರಾಷ್ಟ್ರದ ಅಖಂಡತೆ, ಭದ್ರತೆ ಹಾಗೂ ಶಾಂತಿಗೆ ಅಪಾಯವಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಜರಂಗದಳವು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಫೆ. 25ರಂದು ಪ್ರತಿಭಟನೆ ಹಮ್ಮಿಕೊಂಡಿದೆ.

ಉಡುಪಿ ಕಲ್ಸಂಕದಿಂದ ಜಿಲ್ಲಾಧಿಕಾರಿ ಕಚೇರಿಗೆ 3.30ಕ್ಕೆ ಬೈಕ್‌ ರ್ಯಾಲಿಯಲ್ಲಿ ತೆರಳಿ ಪ್ರತಿಭಟನೆ ನಡೆಸಲಾಗುವುದು. ಮಂಗಳೂರು, ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು 4 ಗಂಟೆಗೆ, ಪುತ್ತೂರಿನಲ್ಲಿ ತಹಶೀಲ್ದಾರ್‌ ಕಚೇರಿ ಎದುರು ಬೆಳಗ್ಗೆ 10ಕ್ಕೆ ಪ್ರತಿಭಟನೆ ನಡೆಸಲಾಗುವುದು.

ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಬಾಂಗ್ಲಾ ನುಸುಳುಕೋರರು ಭಾರತಕ್ಕೆ ಅಕ್ರಮವಾಗಿ ನುಸುಳುತ್ತಿದ್ದಾರೆ. ಸುಮಾರು 3 ಕೋಟಿಗೂ ಅಧಿಕ ಬಾಂಗ್ಲಾ ದೇಶಿಗರು ಭಾರತದಲ್ಲಿ ವಾಸಿಸುತ್ತಿದ್ದಾರೆ ಎಂದು ಬಜರಂಗದಳದ ಪ್ರಾಂತ ಸಂಚಾಲಕ ಶರಣ್‌ ಪಂಪ್‌ವೆಲ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com