ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಬಿಜೆಪಿ ಸದಾ ಬದ್ಧ ಬಿ.ಎಸ್‌. ಯಡಿಯೂರಪ್ಪ

ಕೊಲ್ಲೂರು : ರಾಜ್ಯದ ಬಿಜೆಪಿ ಸರಕಾರ ಸಮಾಜದ ಕಟ್ಟುಕಡೆಯ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ಸು ಸಾಧಿಸಿತ್ತು. ಇದೀಗ ಆಳುವ ಕಾಂಗ್ರೆಸ್‌ ಪಕ್ಷ ಅಭಿವೃದ್ಧಿ ಕಾರ್ಯದತ್ತ ಒತ್ತು ನೀಡದೆ ಕೇವಲ ಘೋಷಣೆಯಲ್ಲೇ ಕಾಲ ಕಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೈಂದೂರು - ಚಿಕ್ಕಮಗಳೂರು ಬಿಜೆಪಿ ಲೋಕಸಭಾ ಅಭ್ಯರ್ಥಿ ಬಿ.ಎಸ್‌. ಯಡಿಯೂರಪ್ಪ ಆರೋಪಿಸಿದರು.

ವ್ಯರ್ಥ ಸಾಧನೆ

ಅವರು ಮಾ. 26ರಂದು ಕೊಲ್ಲೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಕೇಜ್ರಿವಾಲ ಇನ್ನೊಬ್ಬರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕಾಲ ಕಳೆಯುತ್ತಿರುವುದು ವ್ಯರ್ಥ ಸಾಧನೆ. ಅದರಿಂದ ಅವರು ಏನನ್ನೂ ಗೆಲ್ಲಲು ಸಾಧ್ಯವಿಲ್ಲ. ತಾನು ಜಾತ್ಯತೀತ ನಾಯಕನಾಗಿದ್ದು, ಎಲ್ಲ ವರ್ಗದ ಜನರ ನೋವಿಗೆ ಸ್ಪಂದಿಸಿದ್ದೇನೆ ಎಂದರು.

ರಾಜ್ಯದಲ್ಲಿನ ಗ್ರಾಮೀಣ ಪ್ರದೇಶದ ಆರ್ಥಿಕ ದುರ್ಬಲರ ಸಮಸ್ಯೆಗಳಿಗೆ ಸ್ಪಂದಿಸುವುದಲ್ಲದೇ ಮಹಿಳೆಯರ ಸಶಕ್ತೀಕರಣಕ್ಕೆ ವಿವಿಧ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಿದ್ದೇನೆ. ಬೈಂದೂರು ಕ್ಷೇತ್ರದ ಉದ್ದಗಲಕ್ಕೂ ಕರಾವಳಿಯ ತೀರದ ಮೀನುಗಾರರ ಸಮಸ್ಯೆಗಳಿಗೆ ಲೋಕಸಭಾ ಸದಸ್ಯ ರಾಘವೇಂದ್ರ ಅವರು ಸ್ಪಂದಿಸಿದ್ದಾರೆ ಎಂದು ಅವರು ಹೇಳಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಸ್ಥಾನಗಳನ್ನು ಬಿಜೆಪಿ ಗಳಿಸುವುದು ನಿಶ್ಚಿತ ಎಂದು ಅವರು ನುಡಿದರು.

ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ, ಬಿಜೆಪಿ ಬೈಂದೂರು ಬ್ಲಾಕ್‌ ಅಧ್ಯಕ್ಷ ಬಿ.ಎಂ. ಸುಕುಮಾರ ಶೆಟ್ಟಿ ಉಪಸ್ಥಿತರಿದ್ದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com