ಪಿಯುಸಿ ಪರೀಕ್ಷೆಗೆ 2361 ವಿದ್ಯಾರ್ಥಿಗಳು ಹಾಜರು

ಉಡುಪಿ: ಜಿಲ್ಲೆಯ ನಾನಾ ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜೀವಶಾಸ್ತ್ರ ಪರೀಕ್ಷೆಯಲ್ಲಿ 2,274 ವಿದ್ಯಾರ್ಥಿಗಳು ಹಾಜರಾಗಿದ್ದು, 14 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಎಲೆಕ್ಟ್ರಾನಿಕ್ಸ್ ಪರೀಕ್ಷೆಯಲ್ಲಿ ಒಟ್ಟು 88 ವಿದ್ಯಾರ್ಥಿಗಳಲ್ಲಿ 87 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1 ವಿದ್ಯಾರ್ಥಿ ಗೈರುಹಾಜರಾಗಿದ್ದಾರೆ ಎಂದು ಡಿಡಿಪಿಯು ಶಿಂಧಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಬ್ರಹ್ಮಾವರ, ಕೋಟ ಮತ್ತು ಬಿದ್ಕಲ್‌ಕಟ್ಟೆ ಕೇಂದ್ರಗಳಲ್ಲಷ್ಟೇ ಎಲೆಕ್ಟ್ರಾನಿಕ್ಸ್ ಪರೀಕ್ಷೆ ನಡೆದಿದೆ. ಯಾವುದೇ ನಕಲು, ಪರೀಕ್ಷಾ ಅಕ್ರಮಗಳು ನಡೆದಿಲ್ಲ ಎಂದು ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಶಿಂಧಾ ತಿಳಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com