ನಾನು ಕಾಂಗ್ರೆಸ್‌ನ ಪ್ರಮಾಣಿಕ ಕಾರ್ಯಕರ್ತ: ಮಂಜುನಾಥ ಭಂಡಾರಿ

ಸಿದ್ದಾಪುರ: ಕಾಂಗ್ರೆಸ್‌ ಪಕ್ಷದ ನಾನೊಬ್ಬ ನಿಷ್ಠಾವಂತ ಕಾರ್ಯಕರ್ತ. ಭ್ರಷ್ಟರಾಜಕಾರಿಣಿಯ ವಿರೂಧ ಹೋರಾಡಲು ಪಕ್ಷ ನನ್ನನು ಗುರುತಿಸಿ, ಶಿವಮೊಗ್ಗ ಲೋಕ ಸಭಾ ಕ್ಷೇತ್ರಕ್ಕೆ ಟಿಕೆಟ್‌ ನೀಡಿದೆ. ಪಕ್ಷದಲ್ಲಿ 34ವರ್ಷ ವಿವಿಧ ಹಂತದಲ್ಲಿ ಕೆಲಸ ಮಾಡಿ ಅನುಭವ ಇದೆ. ಕಾಂಗ್ರೆಸ್‌ ಪಕ್ಷದ ಪ್ರಮಾಣಿಕ ಕಾರ್ಯಕರ್ತ ಪ್ರತಿನಿಧಿಯಾಗಿರುವುದರಿಂದ, ಚುನಾವಣೆಯಲ್ಲಿ ಗೆಲುವುಗಾಗಿ ಯಾರನ್ನೂ ದೂಷಣೆ ಮಾಡೋದಿಲ್ಲ ಎಂದು ಶಿವಮೊಗ್ಗ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯಾರ್ಥಿ ಮಂಜುನಾಥ ಭಂಡಾರಿ ಅವರು ಹೇಳಿದರು.

ಅವರು ಸಿದ್ದಾಪುರದ ಶ್ರೀ ದುರ್ಗಾ ಕಾಂಪ್ಲೆಕ್ಸ್‌ನಲ್ಲಿ ಜರುಗಿದ ಕಾಂಗ್ರೆಸ್‌ ಪ್ರಚಾರ ಅಭಿಯಾನ ಮತ್ತು ಕಾರ್ಯಕರ್ತರ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿವಮೊಗ್ಗ ಲೋಕ ಸಭಾ ಕ್ಷೇತ್ರದಲ್ಲಿ ಮೂವರು ಶಾಸಕರನ್ನು ಹೊಂದಿರುವ ಕಾಂಗ್ರೆಸ್‌ ಪಕ್ಷವು ಬಲಿಷ್ಠವಾಗಿದೆ. ಈ ಭಾರಿ ಕ್ಷೇತ್ರದಲ್ಲಿ ಕಾರ್ಯಕರ್ತರು ಸಂಘಟನಾತ್ಮಕವಾಗಿ ಕೆಲಸ ನಿರ್ವಹಿಸುತ್ತಾರೆ. ಇದರಿಂದಾಗಿ ಶಿವಮೊಗ್ಗ ಲೋಕ ಸಭಾ ಕ್ಷೇತ್ರದಲ್ಲಿ ಆಚ್ಚರಿಯ ರೀತಿಯಲ್ಲಿ ಫಲಿತಾಂಶ ಹೊರಬೀಳಲ್ಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಕೆ. ಗೋಪಾಲ ಪೂಜಾರಿ, ವಂಡ್ಸೆ ಬ್ಲಾಕ್‌ ಅಧ್ಯಕ್ಷ ಎಸ್‌. ಸಂಜೀವ ಶೆಟ್ಟಿ, ಬೈಂದೂರು ಬ್ಲಾಕ್‌ ಅಧ್ಯಕ್ಷ ರಮೇಶ್‌ ಗಾಣಿಗ, ಸಿದ್ದಾಪುರ ಗ್ರಾ. ಪಂ. ಅಧ್ಯಕ್ಷ ಸದಾನಂದ ಭಂಡಾರಿ, ಉಪಾಧ್ಯಕ್ಷೆ ಶ್ಯಾಮಲ ಶೆಟ್ಟಿ, ತಾ. ಪಂ. ಸದಸ್ಯರಾದ ರಾಜು ಪೂಜಾರಿ, ಎಚ್‌. ಮಂಜಯ್ಯ ಶೆಟ್ಟಿ, ಮುಖಂಡರಾದ ಪ್ರಕಾಶ್ಚಂದ್ರ ಶೆಟ್ಟಿ, ವಾಸುದೇವ ಯಡಿಯಾಳ, ಪ್ರಸನ್ನ ಶೆಟ್ಟಿ ಕೆರಾಡಿ, ರಿಯಾಜ್‌ ಅಹಮ್ಮದ್‌, ಸತೀಶ್‌ ಕುಮಾರ್‌ ಶೆಟ್ಟಿ ಕಡ್ರಿ, ಶಾಡಿಗುಂಡಿ ರಾಜೀವ ಶೆಟ್ಟಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮತ್ತು ಮುಂತಾದವರು ಉಪಸ್ಥಿತರಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com