ಅಗೋಚರ ಶಕ್ತಿ ಪುನರುಜ್ಜೀವನಗೊಳಿಸುವುದೇ ಬ್ರಹ್ಮಕಲಶ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಬಾರಕೂರು : ಬ್ರಹ್ಮಕಲಶ ಅಂದರೆ ಅಗೋಚರ ಶಕ್ತಿಯನ್ನು ಪುನರುಜ್ಜೀವನಗೊಳಿಸುವಿಕೆ ಎಂದು ಉಡುಪಿ ಪೇಜಾವರ ಮಠದ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಬಾರಕೂರು ಬಂಡೀಮಠ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಬದುಕಿನ ಯಶಸ್ಸಿಗೆ ದೇವರು, ಪೂಜೆ , ನಂಬಿಕೆ, ಆಚರಣೆ ಮತ್ತು ದೇವಾಲಯದ ಕಲ್ಪನೆಗಳು ಮನುಷ್ಯ ಜೀವನಕ್ಕೆ ಅರ್ಥವನ್ನು ಕಲ್ಪಿಸುತ್ತದೆ ಎಂದರು. 

ಸಮಿತಿಯ ಗೌರವಾಧ್ಯಕ್ಷ ಉದ್ಯಮಿ ಬಾರಕೂರು ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ಸಂಸ್ಕಾರ ಭಾರತಿ ಸಂಚಾಲಕ ಆದರ್ಶ ಗೋಖಲೆ ಧಾರ್ಮಿಕ ಉಪನ್ಯಾಸ ನೀಡಿದರು. ಹುಬ್ಬಳ್ಳಿ ಉದ್ಯಮಿ ಬಿ. ಕರುಣಾಕರ ಶೆಟ್ಟಿ, ಬ್ರಹ್ಮಾವರ ರೋಟರಿ ಕ್ಲಬ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಹನೆಹಳ್ಳಿ ಗ್ರಾಪಂ ಅಧ್ಯಕ್ಷೆ ಸುಜಾತ ಸಂತೋಷ್ ಪೂಜಾರಿ ಉಪಸ್ಥಿತರಿದ್ದರು. 

ವೇಮೂ ರಮೇಶ ಭಟ್ ನಾಯರ್‌ಬೆಟ್ಟು, ಡಾ. ಬಿ. ಮಂಜುನಾಥ ಭಟ್, ಬಂಟ್ಸ್ ಸೋಲಾರ್ ಇಂಡಿಯಾ ಪ್ರೈ. ಲಿಮಿಟೆಡ್‌ನ ಬಿ. ಚಂದ್ರಶೇಖರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೆ ಸಹಕರಿಸಿದವರನ್ನು, ದಾನಿಗಳನ್ನು ಗೌರವಿಸಲಾಯಿತು. ಪ್ರಚಾರ ಸಮಿತಿಯ ಅಧ್ಯಕ್ಷ ಬಂಡೀಮಠ ಶಿವರಾಮ ಆಚಾರ್ಯ ಸನ್ಮಾನಿತರನ್ನು ಪರಿಚಯಿಸಿದರು. 

ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಬಿ.ಎಂ. ಭಟ್ ಸ್ವಾಗತಿಸಿದರು. ಟಿ.ಜಿ. ಆಚಾರ್ಯ ಬಂಡೀಮಠ ಕಾರ್ಯಕ್ರಮ ನಿರೂಪಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ. ರಾಜಶೇಖರ ಅಡಿಗ, ಪ್ರಧಾನ ಕಾರ್ಯದರ್ಶಿ ಬಿ. ವಾಸುದೇವ ಆಚಾರ್ಯ, ವೇಮೂ ತಮ್ಮಣ್ಣ ಅಡಿಗ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಚೇರ್ಕಾಡಿಯ ಕಲಾಶ್ರೀ ಬಾಲಕಿಯರ ಯಕ್ಷಗಾನ ಮೇಳದವರಿಂದ ಶ್ರೀಕೃಷ್ಣ ಪಾರಿಜಾತ ಯಕ್ಷಗಾನ ಜರುಗಿತು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com