ಏ. 5 ಮತ್ತು 6ರಂದು 31ನೇ ರಾಷ್ಟ್ರೀಯ ಕನ್ನಡ ಸಮ್ಮೇಳನ

ಉಡುಪಿ: 'ದೆಹಲಿ ಕನ್ನಡಿಗ' ಪತ್ರಿಕೆ ಆಶ್ರಯದಲ್ಲಿ ನಡೆಯಲಿರುವ ಈ ಸಮ್ಮೇಳನವನ್ನು ಕರ್ನಾಟಕ ರಾಜ್ಯ ಮಹಿಳಾ ವಿ.ವಿ.ಯ ಕುಲಪತಿ ಡಾ. ಮೀನಾ ಚಂದಾವರ್ಕರ್ ಅವರು ಉದ್ಘಾಟಿಸಲಿರುವರು. ಸುಪ್ರಸಿದ್ಧ ಕೃಷಿ ವಿಜ್ಞಾನಿ, ಕೃಷಿ ಮಂತ್ರಾಲಯದ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮಹಾನಿರ್ದೇಶಕ, ಕೃಷಿ ಸಂಶೋಧನಾ, ಶಿಕ್ಷಣ ವಿಭಾಗದ ಕಾರ್ಯದರ್ಶಿ ಡಾ. ಎಸ್. ಅಯ್ಯಪ್ಪನ್ ಅಧ್ಯಕ್ಷತೆ ವಹಿಸಲಿರುವರು. ಇಂಡಿಯನ್ ಓವರ್ಸೀಸ್ ಬ್ಯಾಂಕಿನ ಅಧ್ಯಕ್ಷ ಎಂ. ನರೇಂದ್ರ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿರುವರು. ಶೈಕ್ಷಣಿಕ ಯೋಜನೆ ಮತ್ತು ಆಡಳಿತದ ರಾಷ್ಟ್ರೀಯ ವಿ.ವಿ.ಯ ಕುಲಪತಿ ಪ್ರೊ. ಆರ್. ಗೋವಿಂದ ಅವರು ಪುಸ್ತಕ ಮತ್ತು ಕಲಾ ಪ್ರದರ್ಶನ ಉದ್ಘಾಟಿಸಲಿರುವರು.
       ಸಮ್ಮೇಳನದ ವಿವಿಧ ಕಾರ್ಯಕ್ರಮಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಸಂಗಮೇಶ ಬಾದವಾಡಗಿ, ಸಂಗೀತ ನಿರ್ದೇಶಕ ಉಡುಪಿ ವಾಸುದೇವ ಭಟ್, ಧಾರವಾಡ ಕೃಷಿ ವಿ.ವಿ.ಯ ವಿಶ್ರಾಂತ ಕುಲಪತಿ ಡಾ. ಆರ್.ಆರ್. ಹಂಚಿನಾಳ್, ದೆಹಲಿ ದೂರದರ್ಶನ ಕೇಂದ್ರದ ಹೆಚ್ಚುವರಿ ಮಹಾನಿರ್ದೇಶಕ ನಾಡೋಜ ಡಾ. ಮಹೇಶ್ ಜೋಷಿ ಅವರು ಉದ್ಘಾಟಿಸಲಿರುವರು.
        ಸಮ್ಮೇಳನದಲ್ಲಿ ಕನ್ನಡಕ್ಕೆ ಸಂಬಂಧಿಸಿದಂತೆ ವಿಚಾರ ಸಂಕಿರಣಗಳು, ಕವಿಗೋಷ್ಠಿ, ಮಹಿಳಾ ಉತ್ಸವ, ಸಂಗೀತ, ನೃತ್ಯ, ನಾಟಕ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಪುಸ್ತಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ದೇಶಾದ್ಯಂತದಿಂದ ಸಾಹಿತಿಗಳು, ಕಲಾವಿದರು, ಪ್ರಾಧ್ಯಾಪಕರು, ಕನ್ನಡ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಎರಡು ಸಾವಿರ ಪ್ರತಿನಿಧಿಗಳು ಭಾಗವಹಿಸಲಿರುವರು. ಕನ್ನಡಕ್ಕೆ ಇನ್ನೂ ಹೆಚ್ಚಿನ ರಾಷ್ಟ್ರೀಯ ಮತ್ತು
ಅಂತಾರಾಷ್ಟ್ರೀಯ ಗೌರವ, ಮಾನ್ಯತೆ ದೊರಕಿಸುವುದರೊಂದಿಗೆ ಕನ್ನಡಿಗರಿಗೆ ಸಿಗಬೇಕಾದ ಎಲ್ಲ ಹಕ್ಕುಗಳನ್ನು ದೊರಕಿಸುವುದೇ ಈ ಸಮ್ಮೇಳನದ ಮುಖ್ಯ ಉದ್ದೇಶವಾಗಿದೆ ಎಂದು ಸಾಮಗ  ಪತ್ರಿಕೆಗಳಿಗೆ ತಿಳಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com