ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲಗೊಳಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.  ನೀತಿ ಸಂಹಿತೆ ಸಡಿಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್‌ ಮುಖರ್ಜಿ ಅವರು ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು.
        ಈ ಮನವಿ ಪುರಸ್ಕರಿಸಿರುವ ಆಯೋಗ ಮಾ. 5ರಿಂದ ರಾಜ್ಯದಲ್ಲಿ ಜಾರಿಯಲ್ಲಿದ್ದ ನೀತಿ ಸಂಹಿತೆಯ ಕೆಲ ನಿರ್ಬಂಧಗಳನ್ನು ಸಡಿಲಗೊಳಿಸಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್‌ ಕುಮಾರ್‌ ಝಾ ತಿಳಿಸಿದ್ದಾರೆ.
     ಆಯೋಗದ ಆದೇಶದ ಪ್ರಕಾರ ಬರ ಪರಿಹಾರ ಕಾಮಗಾರಿ, ಕುಡಿಯುವ ನೀರು ಪೂರೈಕೆ, ಬಜೆಟ್‌ ಘೋಷಿತ ಕಾರ್ಯಕ್ರಮಗಳ ಜಾರಿಗೆ ಯಾವುದೇ ಅಡ್ಡಿ ಇಲ್ಲ. ಜತೆಗೆ ಜಿಲ್ಲಾ ಉಸ್ತುವಾರಿ ಸಚಿವರು ಪ್ರಗತಿ ಪರಿಶೀಲನಾ ಸಭೆ ನಡೆಸಬಹುದು. ಆದರೆ, ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಸರ್ಕಾರಿ ನೌಕರರನ್ನು ಪ್ರತ್ಯೇಕವಾಗಿ ಕರೆದು ಸಲಹೆ-ಸೂಚನೆ ನೀಡುವಂತಿಲ್ಲ ಎಂದು ಚುನಾವಣಾ ಆಯೋಗ ನಿರ್ದೇಶನ ನೀಡಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com