ಭಾರತ ನೆಲ ಕಬಳಿಸಲು ನೆರೆ ರಾಷ್ಟ್ರಗಳ ಹುನ್ನಾರ: ಶೋಭಾ ಕರಂದ್ಲಾಜೆ

ಕೋಟೇಶ್ವರ : ಭಾರತದ ನೆಲವನ್ನು ಕಬಳಿಸಲು ನೆರೆ ರಾಷ್ಟ್ರಗಳು ಹುನ್ನಾರ ನಡೆಸುತ್ತಿದ್ದರೂ ಆ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಅತ್ಯಂತ ದುರ್ಬಲ ಸರಕಾರ ಯುಪಿಎ. ದೇಶವನ್ನು ಗಟ್ಟಿಗೊಳಿಸುವ ನಾಯಕತ್ವದ ಕೊರತೆ ಕಾಂಗ್ರೆಸ್‌ನಲ್ಲಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಸೋಮವಾರ ಸಂಜೆ ಕೋಟೇಶ್ವರದ ಸರಸ್ವತಿ ಸಭಾಭವನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಸಮರ್ಥ ನಾಯಕತ್ವ ಉಳ್ಳ ಬಿಜೆಪಿ ನೇತೃತ್ವದ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಾರದಿದ್ದಲ್ಲಿ ಭಾರೀ ಗಂಡಾಂತರ ಎದುರಾದೀತು. ದೇಶದಲ್ಲಿ ಬದಲಾವಣೆ ತರಬಲ್ಲ ವ್ಯಕ್ತಿತ್ವ ಹೊಂದಿರುವ ನರೇಂದ್ರ ಮೋದಿ ಅವರ ಸಾಧನೆ ಗುಜರಾತ್‌ ರಾಜ್ಯದ ಜನತೆಯ ಮನದಲ್ಲಿ ಸದಾ ಇದೆ. ರಾಜ್ಯದ ಏಕೈಕ ಬಿಜೆಪಿ ಮಹಿಳಾ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶೋಭಾಗೆ ಮತನೀಡಿ ಗೆಲ್ಲಿಸಬೇಕು ಎಂದು ವಿನಂತಿಸಿದರು.

ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ರಾಜೇಶ ಕಾವೇರಿ, ರಾಜ್ಯ ಮೀನುಗಾರ ಪ್ರಕೋಷ್ಠ ಸಂಚಾಲಕ ಕಿಶೋರ್‌ ಕುಮಾರ್‌, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ, ಕೋಟೇಶ್ವರ ಶಕ್ತಿ ಕೇಂದ್ರದ ಅಧ್ಯಕ್ಷ ರವೀಂದ್ರ ದೊಡ್ಮನೆ, ಜಿ.ಪಂ. ಸದಸ್ಯ ಗಣಪತಿ ಶ್ರೀಯಾನ್‌, ತಾ.ಪಂ. ಸದಸ್ಯ ಲಕ್ಷ್ಮಣ ಮೊಗವೀರ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶೀಲಾ ಶೆಟ್ಟಿ, ಮೀನುಗಾರಿಕಾ ಫೆಡರೇಶನ್‌ ಅಧ್ಯಕ್ಷ ಯಶಪಾಲ್‌ ಸುವರ್ಣ, ರಾಜ್ಯ ಬಿಜೆಪಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶ್ಯಾಮಲಾ ಕುಂದರ್‌, ಬಿಜೆಪಿ ವಕ್ತಾರ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ವೀಣಾ ಶೆಟ್ಟಿ ಉಪಸ್ಥಿತರಿದ್ದರು, ಯುವ ಮೋರ್ಚಾ ಅಧ್ಯಕ್ಷ ಶಂಕರ ಅಂಕದ ಕಟ್ಟೆ ಸ್ವಾಗತಿಸಿ ವಂದಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com